Advertisement
ತಮ್ಮಲ್ಲಿರುವ ಸಿಬಂದಿಯಲ್ಲಿ ಶೇ.30 ಮಂದಿಯನ್ನು ಉದ್ಯೋಗದಿಂದ ತೆಗೆದುಹಾಕುವುದಾಗಿ ಸಣ್ಣ ರೀಟೇಲರ್‌ಗಳು ತಿಳಿಸಿದ್ದಾರೆ. ಇದರೊಂದಿಗೆ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ.20 ಮಂದಿ ಕೆಲಸ ಕಳೆದುಕೊಳ್ಳುವ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಆರ್‌ಎಐ ತಿಳಿಸಿದೆ.
ಲಾಕ್ ಡೌನ್‌ನ ಈ ಪರಿಸ್ಥಿತಿಯಲ್ಲಿ ದೇಶದಲ್ಲಿ ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಹಾಗೂ ಕಾಳಸಂತೆಯ ಮಾರಾಟವನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಂದ್ರದ ಅಧಿಕಾರಿಗಳು ರಾಜ್ಯ ಸರಕಾರಗಳ ಸಹಕಾರದೊಂದಿಗೆ ಅಕ್ರಮ ದಾಸ್ತಾನು, ಕಾಳಸಂತೆ ವಿರುದ್ಧ ಸಮರ ಸಾರಬೇಕೆಂದು ಅವರು ಸೂಚಿಸಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಪುಣ್ಯಾ ಸಲಿಯಾ ಶ್ರೀವಾಸ್ತವ ತಿಳಿಸಿದ್ದಾರೆ.