Advertisement
ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6680 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 124 ಸೋಂಕಿತರು ಮೃತಪಟ್ಟಿದ್ದಾರೆ.
Related Articles
Advertisement
ಇನ್ನುಳಿದಂತೆ, ಚಿಕ್ಕಬಳ್ಳಾಪುರ (98), ಮಂಡ್ಯ (91), ಕೋಲಾರ (90), ಬೆಂಗಳೂರು ಗ್ರಾಮಾಂತರ (87), ಗದಗ (79), ಹಾವೇರಿ (76), ಚಿತ್ರದುರ್ಗ (71), ಚಿಕ್ಕಮಗಳೂರು (69), ಉತ್ತರ ಕನ್ನಡ (61), ಚಾಮರಾಜನಗರ (36), ರಾಮನಗರ (32), ಕೊಡಗು (25) ಮತ್ತು ಶಿವಮೊಗ್ಗ (1) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಇಂದು ರಾಜ್ಯದಲ್ಲಿ ಒಟ್ಟು 18,352 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 25,274 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 43,626 ಸೋಂಕು ಪತ್ತೆ ಪರಿಕ್ಷೆಗಳನ್ನು ನಡೆಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 5,08,369 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 15,29,017 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 20,37,386 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು ಕೋವಿಡ್ 19 ಸೋಂಕಿತ ಪ್ರಕರಣಗಳ ಸಂಖ್ಯೆ 89,811ಕ್ಕೆ ಏರಿಕೆಯಾಗಿದ್ದು, 53,782 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 34,584ಕ್ಕೆ ಏರಿಕೆಯಾಗಿದೆ. ಇಲ್ಲಿ ಕೋವಿಡ್ ಸಂಬಂಧಿತ 1444 ಸಾವು ಸಂಭವಿಸಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 14,188 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 8208 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 5817 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 163 ಸಾವು ಸಂಭವಿಸಿದೆ.
ಮೈಸೂರು ಜಿಲ್ಲೆಯಲ್ಲಿ 10535 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 6475 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3756 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 304 ಸಾವು ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 8873ಕ್ಕೆ ಏರಿಕೆಯಾಗಿದ್ದು ಇವರಲ್ಲಿ 6436 ಸೋಂಕಿತರು ಗುಣಮುಖರಾಗಿದ್ದಾರೆ. 2168 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 267 ಸಾವು ಸಂಭವಿಸಿದೆ. ಬೆಂಗಳೂರು ನಗರ (1444) ಹಾಗೂ ಮೈಸೂರು (304) ಜಿಲ್ಲೆಗಳ ಬಳಿಕ ಕೋವಿಡ್ 19 ಸಂಬಂಧಿ ಅತೀ ಹೆಚ್ಚಿನ ಸಾವು ಸಂಭವಿಸಿರುವ ಜಿಲ್ಲೆ ಇದಾಗಿದೆ.
ಕಲಬುರಗಿಯಲ್ಲಿ ಒಟ್ಟು 8825 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 6691 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 1971 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 163 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 7974 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 5240 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 2655 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ 19 ಸೋಂಕು ಸಂಬಂಧಿ 79 ಸಾವಿನ ಪ್ರಕರಣಗಳು ದಾಖಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ 7654 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 4834 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 2586 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 234 ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ 7794 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3877 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 3796 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 121 ಸಾವು ಸಂಭವಿಸಿದೆ.
ದಾವಣಗೆರೆ ಜಿಲ್ಲೆಯಲ್ಲಿ 5301 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3529 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1644 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 128 ಸಾವು ಸಂಭವಿಸಿದೆ.
ರಾಯಚೂರು ಜಿಲ್ಲೆಯಲ್ಲಿ 5089 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3131 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1901 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 57 ಸಾವು ಸಂಭವಿಸಿದೆ.
ವಿಜಯಪುರ ಜಿಲ್ಲೆಯಲ್ಲಿ 4870 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 3780 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 1036 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 54 ಸಾವು ಸಂಭವಿಸಿದೆ.