Advertisement

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿ

08:58 PM Apr 15, 2020 | keerthan |

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿಯ ಕೋವಿಡ್-19 ಸೋಂಕಿತ ವ್ಯಕ್ತಿ (ಪಿ-224) ನ ಜತೆ ಪ್ರಾಥಮಿಕ ಸಂಪರ್ಕಕ್ಕೆ ಬಂದು ಎರಡು ದಿನಗಳ ಹಿಂದೆಯಷ್ಟೇ ಮೃತಪಟ್ಟಿದ್ದ 80 ವರ್ಷದ ವೃದ್ಧೆ ಕೋವಿಡ್-19 ದಿಂದಲೇ ಮೃತಪಟ್ಟಿರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಮೊದಲ ಬಲಿಯಾದಂತಾಗಿದೆ.

Advertisement

ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್‌ದಿಂದ ವಾಪಸ್ಸಾಗಿದ್ದ ಯುವಕನ ಅಜ್ಜಿಗೂ ಸೋಂಕು ತಗುಲಿದ್ದು ದೃಢಪಟ್ಟಿದ್ದು, ಕೋವಿಡ್-19 ದಿಂದಲೇ ವೃದ್ಧೆಯ ಸಾವಾಗಿರುವುದು ಈಗ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮೂರು ದಿನಗಳ ಹಿಂದೆ ವೃದ್ಧೆ ಮೃತಪಟ್ಟಾಗ ಶಂಕೆ ವ್ಯಕ್ತಪಡಿಸಿ ಕೂಡಲೇ ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದ ನಂತರ ಮರಣದ ನಿರ್ದಿಷ್ಟ ಕಾರಣ ತಿಳಿದು ಬಂದಿದೆ. ಈಗ ಜಿಲ್ಲೆಯಲ್ಲಿ ‌‌ಸೋಂಕಿತರ ಸಂಖ್ಯೆ 19ಕ್ಕೇರಿದೆ.

ಜನರ ಆರೋಗ್ಯದ ದೃಷ್ಟಿಯಿಂದ ವೃದ್ಧೆಯ ಅಂತ್ಯಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ನೆರವೇರಿಸಲಾಗಿತ್ತು.

ಇನ್ನೂ ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ಜನರನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next