ದೇಶಾದ್ಯಂತ ಕೋವಿಡ್ ಸೋಂಕಿನ ಪ್ರಕರಣ 81 ಸಾವಿರ ದಾಟಿದೆ. ರಾಜ್ಯಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಈ ಅಂಶ ದೃಢಪಟ್ಟಿದೆ.
ಕೇವಲ ಎರಡು ದಿನಗಳ ಅವಧಿಯಲ್ಲಿ 10 ಸಾವಿರದಷ್ಟು ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಎರಡು ಮತ್ತು ಮೂರನೇ ಸ್ಥಾನಗಳಲ್ಲಿ ಕ್ರಮವಾಗಿ ತಮಿಳುನಾಡು, ಗುಜರಾತ್ ಇದೆ.
3,722 ಮಂದಿಗೆ ಸೋಂಕು: ಬುಧವಾರ ಬೆಳಗ್ಗೆ 8ರಿಂದ ಗುರುವಾರ ಬೆಳಗ್ಗೆ 8ರವರೆಗೆ ದೇಶಾದ್ಯಂತ 3,722 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ. ಈ ಅವಧಿಯಲ್ಲಿ 134 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಈವರೆಗೆ 26,234 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ ಶೇ.33.63ರಷ್ಟು ಗುಣಮುಖ ಪ್ರಮಾಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾ.5ರ ನಂತರ ಕಟ್ಟುನಿಟ್ಟಿನ ಕ್ರಮ ಕೈಗೊಂಡದ್ದರಿಂದ ಸಿಕ್ಕಿಂನಲ್ಲಿ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ.