ಉಡುಪಿ: ಜಿಲ್ಲೆಯಲ್ಲಿ ಇಂದು 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆಯಾಗಿದೆ.
ಇಂದಿನ ಎಲ್ಲಾ 14 ಪ್ರಕರಣಗಳೂ ಕೂಡಾ ಮಹಾರಾಷ್ಟ್ರದಿಂದ ಬಂದವರಿಂದಲೇ ವರದಿಯಾಗಿದೆ. ಇವರೆಲ್ಲರನ್ನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಇವರಲ್ಲಿ ಇಬ್ಬರು ಹತ್ತು ವರ್ಷಕ್ಕಿಂದ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರೆ, ಇಬ್ಬರು 60 ವರ್ಷಕ್ಕಿಂದ ಮೇಲ್ಪಟ್ಟ ವೃದ್ಧರೂ ಸೇರಿದ್ದಾರೆ.
ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಸೋಂಕು ಪ್ರಕರಣ ಹೆಚ್ಚುತ್ತಿದೆ. ಕೇರಳ, ತೆಲಂಗಾಣ ಪ್ರಯಾಣಿಕರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆದರೆ ಮಹಾರಾಷ್ಟ್ರದ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ.
ಗುರುವಾರ ಜಿಲ್ಲೆಯಲ್ಲಿ ಒಟ್ಟು 29 ಪ್ರಕರಣ ದೃಢವಾಗಿತ್ತು. ಅದರಲ್ಲಿ ಹೆಚ್ಚಿನವರು ಮಹಾರಾಷ್ಟ್ರದಿಂದ ಬಂದವರಾಗಿದ್ದರು. ಜಿಲ್ಲೆಯಲ್ಲಿ ಇದುವರೆಗೆ ಕೇವಲ ಮೂವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಹೊಸ 178 ಸೋಂಕು ಪ್ರಕರಣಗಳು ಕಂಡು ಬಂದಿದೆ. ಆದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2711ಕ್ಕೆ ಎರಿಕೆಯಾಗಿದೆ. ಇದರಲ್ಲಿ 869 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 47 ಜನ ಸೋಂಕಿತರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದು ಇಬ್ಬರು ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.