Advertisement

ಗೌರಿಬಿದನೂರಿನಲ್ಲಿ ಐದು ಹೊಸ ಪ್ರಕರಣ: ರಾಜ್ಯದಲ್ಲಿ 75ಕ್ಕೇರಿದ ಕೋವಿಡ್-19 ಸೋಂಕಿತರ ಸಂಖ್ಯೆ

09:27 AM Mar 29, 2020 | keerthan |

ರಾಮನಗರ: ಅಪಾಯಕಾರಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದುವರೆಗೆ ರಾಜ್ಯದಲ್ಲಿ 75 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢವಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

Advertisement

ರಾಮನಗರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ 75 ಸೋಂಕಿತರ ಪಾಸಿಟಿವ್ ವರದಿ ಬಂದಿದ್ದು, ಎಲ್ಲರ ಮೇಲೂ ನಿಗಾ ಇಡಲಾಗಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಐದು ಹೊಸ ಪ್ರಕರಣಗಳು ಪತ್ತೆಯಾಗಿದೆ. ಇತ್ತೀಚೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದ ಮಹಿಳೆಯ ಮಗ ಹಾಗೂ ಸೊಸೆ, ಅವರ ಮೊಮ್ಮಗ ಸೇರಿದಂತೆ ಸೊಸೆಯ ತಮ್ಮನಿಗೂ ಕೋವಿಡ್-19 ಸೋಂಕು ಪಾಸಿಟಿವ್ ಬಂದಿದೆ‌. ಇದರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲೆಯ ಮೊದಲ ಪ್ರಕರಣದ 31 ವರ್ಷದ ವ್ಯಕ್ತಿಯ ತಂದೆಗೂ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next