Advertisement

ಉಡುಪಿಯಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢ: 149ಕ್ಕೇರಿದ ಸೋಂಕಿತರ ಸಂಖ್ಯೆ

06:04 PM May 28, 2020 | keerthan |

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗಿದ್ದು, ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

Advertisement

ಇಂದು ಮಧ್ಯಾಹ್ನದ ವರದಿಯಲ್ಲಿ 27 ಪ್ರಕರಣಗಳು ವರದಿಯಾಗಿತ್ತು. ಈಗ ಮತ್ತೆ ಇಬ್ಬರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ.

ಮತ್ತೆ ಇಬ್ಬರಲ್ಲಿ ಸೋಂಕು ದೃಢವಾಗಿದ್ದು, ಇವರಿಬ್ಬರೂ ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದಾರೆ. 47 ಮತ್ತು 42 ವರ್ಷದ ಇಬ್ಬರ ದೇಹಕ್ಕೆ ಕೋವಿಡ್-19 ವೈರಾಣು ಸೇರಿರುವುದು ದೃಢವಾಗಿದೆ.

ಇಂದು ಒಟ್ಟು 29 ಜನರಿಗೆ ಸೋಂಕು ತಾಗಿರುವುದು ಪತ್ತೆಯಾಗಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ಇವರಲ್ಲಿ ಮೂವರು ಗುಣಮುಖರಾಗಿದ್ದು, ಉಳಿದ 146 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next