Advertisement

ಪ್ರಸಾರ ಭಾರತಿ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್: ಕ್ವಾಟ್ರಸ್ ಸೀಲ್ ಡೌನ್

03:58 PM Jul 24, 2020 | keerthan |

ಉಡುಪಿ: ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸಾರ ಭಾರತಿ ಸಿಬ್ಬಂದಿಗೆ ಇಂದು ಕೋವಿಡ್ 19 ಸೋಂಕು ದೃಢಪಟ್ಟಿದೆ‌.

Advertisement

ಕೋವಿಡ್19 ಸೋಂಕಿತ ವ್ಯಕ್ತಿಯು ಉಡುಪಿಯ ಬ್ರಹ್ಮಗಿರಿಯಲ್ಲಿರುವ ಸರಕಾರಿ ಕ್ವಾಟ್ರಸ್ ನಲ್ಲಿ ವಾಸವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ವಾಸವಿರುವ ಕ್ವಾಟ್ರಸನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಸೀಲ್ ಡೌನ್ ಮಾಡಿದರು.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಗುರುವಾರ ಜಿಲ್ಲೆಯಲ್ಲಿ 160 ಮಂದಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2846ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next