ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತನ್ನ ಜಾಲವನ್ನು ವಿಸ್ತರಿಸುತ್ತಿದೆ. ಇದೀಗ ಜಿಲ್ಲೆಯ ಮಠಾಧೀಶರಲ್ಲಿ ಕೋವಿಡ್-19 ಸೋಂಕು ಕಂಡುಬಂದಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ನಗರದ ಹೊರವಲಯದ ಸ್ವಾಮೀಜಿಯೊಂದರಲ್ಲಿ ಕೋವಿಡ್-19 ಸೋಂಕು ದೃಢವಾಗಿದೆ. ಸ್ವಾಮೀಜಿಗೆ ಕೋವಿಡ್-19 ಸೋಂಕು ಸ್ವಾಮೀಜಿಗೆ ಹೇಗೆ ಕರೋನಾ ಕಾಣಿಸಿಕೊಂಡಿತು ಎನ್ನುವುದೇ ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿದೆ.
ಸದ್ಯ ಜಿಲ್ಲಾಡಳಿತವು ಸ್ವಾಮೀಜಿಯ ಟ್ರಾವೆಲ್ ಹಿಸ್ಟರಿ ಸಂಗ್ರಹಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಠದ ಆವರಣವನ್ನು ಸೀಲ್ ಡೌನ್ ಮಾಡಲಾಗಿದೆ.
ಸದ್ಯ ಕೋವಿಡ್-19 ಸೋಂಕಿತ ಸ್ವಾಮೀಜಿಯವರನ್ನು ಚಿಕಿತ್ಸೆಗಾಗಿ ಕೋವಿಡ್ -19 ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ ಸಂಜೆಯ ವರದಿಯ ಪ್ರಕಾರ ಜಿಲ್ಲೆಯಲ್ಲಿ 73 ಸೋಂಕು ಪ್ರಕರಣಗಳು ವರದಿಯಾಗಿದೆ. ಇವರಲ್ಲಿ 31 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.