Advertisement
ಹಿರೇಬಾಗೇವಾಡಿಯ ಒಬ್ಬ ಹಾಗೂ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಒಬ್ಬ ವ್ಯಕ್ತಿ ಸೇರಿದಂತೆ ಇಬ್ಬರ ವರದಿಗಳು ನೆಗೆಟಿವ್ ಬಂದಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 42 ಜನ ಸೋಂಕಿತರಲ್ಲಿ ಕಳೆದ ಮೂರು ದಿನಗಳ ಹಿಂದೆ 70 ವರ್ಷದ ವೃದ್ಧ ಗುಣಮುಖರಾಗಿ ಬಿಡುಗಡೆ ಹೊಂದಿದ ಬೆನ್ನಲ್ಲೇ ಇನ್ನಿಬ್ಬರ ವರದಿಗಳು ನೆಗೆಟಿವ್ ಬಂದಿದ್ದರಿಂದ ಬೆಳಗಾವಿಯಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ಇದೀಗ ಒಟ್ಟು ಮೂರು ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 20 ವರ್ಷದ ಯುವಕ (ಪಿ-128) ಹಾಗೂ ಕುಡಚಿಯ 40 ವರ್ಷದ ವ್ಯಕ್ತಿ (ಪಿ-148)ಯನ್ನು ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಇಬ್ಬರೂ ಏ.1 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಡಿಸಿ ಡಾ| ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ. Advertisement
ಕೋವಿಡ್ 19 ಮತ್ತಿಬ್ಬರು ಗುಣಮುಖ
04:08 PM Apr 22, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.