Advertisement
ಕಂಟೈನ್‌ಮೆಂಟ್ ವಲಯಗಳಲ್ಲಿ-ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಇರುತ್ತದೆ.
-ವೈದ್ಯಕೀಯ ತುರ್ತು ಸೇವೆಗಳು ಮತ್ತು ಆವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆ ಗಳನ್ನು ಕಾಪಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ.
ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು ಹೊರತುಪಡಿಸಿ ಎಲ್ಲ ಚಟುವಟಿಕೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾಲಕಾಲಕ್ಕೆ ಹೊರಡಿಸಿದ ಸೂಚನೆಗಳು ಮತ್ತು ಕಾರ್ಯಾಚರಣೆಯ ಕಾರ್ಯವಿಧಾನಗಳ ಷರತ್ತುಗಳೊಂದಿಗೆ ನಡೆಸಲು ಅನುಮತಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಧಾರ್ಮಿಕ ಸ್ಥಳಗಳು /ಪೂಜಾ ಸ್ಥಳಗಳು, ಹೊಟೇಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ಅತಿಥ್ಯ ಸೇವೆಗಳು, ಶಾಪಿಂಗ್ ಮಾಲ್‌ಗಳು ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಗಳಿಂದ ಹೊರಡಿಸಲಾದ ಮಾರ್ಗಸೂಚಿಯ ಷರತ್ತುಗಳನ್ನು ಪಾಲಿಸಬೇಕು. ಕಂಟೈನ್‌ಮೆಂಟ್ ವಲಯ- ಹೊರ ವಲಯ
– ಸಾರ್ವಜನಿಕರು ಎಲ್ಲ ಸಾರ್ವಜನಿಕ ಸªಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು.
– ಸ್ಥಳೀಯ ಪ್ರಾಧಿಕಾರಗಳು ಅದರ ಕಾನೂನು ಗಳು, ನಿಯಮಗಳು ಅಥವಾ ನಿಬಂಧನೆಗಳಿಗೆ ಅನುಗುಣವಾಗಿ ಸಾರ್ವಜನಿಕ ಸ್ಥªಳಗಳಲ್ಲಿ ಉಗಿಯುವುದನ್ನು ನಿರ್ಬಂಧಿಸಿದೆ ಹಾಗೂ ಇದರ ಉಲ್ಲಂಘನೆಗಾಗಿ ನಿಗದಿಪಡಿಸಿದ ದಂಡ ವನ್ನು ವಿಧಿಸಲಾಗುವುದು.
– ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಗೆ ಅವಕಾಶವಿಲ್ಲ.
– ಬೃಹತ್ ಸಾರ್ವಜನಿಕ ಸಭೆಗಳು /ಒಟ್ಟುಗೂಡು ವಿಕೆಗಳನ್ನು ನಿಷೇಧಿಸಲಾಗಿದೆ.
– ಎಲ್ಲ ರಾಜಕೀಯ / ಸಾಮಾಜಿಕ /ಕ್ರೀಡಾ/ ಮನೋರಂಜನಾ/ಶೈಕ್ಷಣಿಕ /ಸಾಂಸ್ಕೃತಿಕ ಮತ್ತು
ಧಾರ್ಮಿಕ ಮತ್ತು ಇತರ ಜನಸೇರುವ ಕಾರ್ಯ ಕ್ರಮಗಳನ್ನು ನಿರ್ಬಂಧಿಸಿದೆ.
– ನಾಟಕ, ಯಕ್ಷಗಾನಗಳನ್ನು ನಡೆಸುವಂತಿಲ್ಲ.
– ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾನಿಲಯ ಗಳು, ವಾಣಿಜ್ಯ ಶಾಲೆಗಳನ್ನು, ಟ್ಯುಟೋರಿಯಲ್ಸ್ ಮತ್ತು ಕೋಚಿಂಗ್ ಸೆಂಟರ್‌ಗಳನ್ನು ಬಂದ್ ಮಾಡಲಾಗಿದ್ದು ಅವುಗಳನ್ನು ತೆರೆಯಬಾರದು.
Related Articles
Advertisement