Advertisement

ಕೋವಿಡ್ 19: ಹೊಸ ಮಾರ್ಗಸೂಚಿ ಪ್ರಕಟ ; ಮಾ.22ರಿಂದ ವಿಮಾನ ಹಾರಾಟ ಇಲ್ಲ

12:39 AM Mar 21, 2020 | Hari Prasad |

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೋವಿಡ್ 19 ವೈರಸ್ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಇಂದು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

Advertisement

ಇದರನ್ವಯ ಮಾರ್ಚ್ 22 ರಿಂದ 29ರವರೆಗೆ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. 65 ವರ್ಷ ಪ್ರಾಯಕ್ಕಿಂತ ಮೇಲ್ಪಟ್ಟ ನಾಗರಿಕರು ಕಡ್ಡಾಯವಾಗಿ ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ. 10 ವರ್ಷದೊಳಗಿನ ಮಕ್ಕಳಿಗೂ ಈ ಸೂಚನೆ ಅನ್ವಯಿಸುತ್ತದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಲ್ಲಾ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳನ್ನು ಮಾರ್ಚ್ 31ರವರೆಗೆ ಮುಚ್ಚುವಂತೆ ಆದೇಶಿಸಲಾಗಿದೆ. ಆಹಾರ ಪದಾರ್ಥಗಳನ್ನು ಹೋಮ್ ಡೆಲಿವರಿ ಮಾಡುವುದನ್ನೂ ಕೇಜ್ರಿಲಾಲ್ ಸರಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ದೆಹಲಿಯಲ್ಲಿ ಇಪ್ಪತ್ತಕ್ಕಿಂತ ಹೆಚ್ಚು ಜನರು ಒಂದೆಡೆ ಗುಂಪು ಸೇರುವುದನ್ನೂ ಸಹ ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next