ನವದೆಹಲಿ:ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ರಾತ್ರಿ ಕರ್ಫ್ಯೂವನ್ನು ಮೇ 8ರವರೆಗೆ ವಿಸ್ತರಿಸಿರುವುದಾಗಿ ಶುಕ್ರವಾರ(ಏಪ್ರಿಲ್ 30) ಘೋಷಿಸಿದೆ.
ಇದನ್ನೂ ಓದಿ:ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ : ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ ಕರ್ಫ್ಯೂ ಮೇ 8ರ ಮುಂಜಾನೆ 5ಗಂಟೆಗೆ ಕೊನೆಗೊಳ್ಳಲಿದೆ ಎಂದು ತೆಲಂಗಾಣ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಏಪ್ರಿಲ್ 30ರವರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಿತ್ತು. ಕರ್ಫ್ಯೂ ಅವಧಿಯಲ್ಲಿ ಎಲ್ಲಾ ಸಂಸ್ಥೆಗಳು, ಅಂಗಡಿಗಳು, ರೆಸ್ಟೋರೆಂಟ್ ಗಳು ಬಂದ್ ಮಾಡುವಂತೆ ನಿರ್ಬಂಧ ವಿಧಿಸಲಾಗಿತ್ತು. ಆಸ್ಪತ್ರೆ, ಲ್ಯಾಬ್, ಮಾಧ್ಯಮ, ಪೆಟ್ರೋಲ್ ಬಂಕ್ ಸೇರಿದಂತೆ ತುರ್ತು ಸೇವೆಗಳಿಗೆ ವಿನಾಯ್ತಿ ನೀಡಲಾಗಿದೆ.
ರಾತ್ರಿ 9ಗಂಟೆ ನಂತರ ಜನರ ಸಂಚಾರ ನಿಷೇಧಿಸಲಾಗಿದೆ. ಸರ್ಕಾರಿ ಅಧಿಕಾರಿಗಳು, ವೈದ್ಯಕೀಯ ಸಿಬಂದಿಗಳಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಕ್ಕೆ ತೆರಳುವವರು ಟಿಕೆಟ್ ತೋರಿಸಿ ಪ್ರಯಾಣಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.