Advertisement

ಕೋವಿಡ್ ದೃಢಪಟ್ಟವರ ವಂಶವಾಹಿ ಪರೀಕ್ಷೆ ನಡೆಸಿ; ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

11:02 PM Dec 20, 2022 | Team Udayavani |

ನವದೆಹಲಿ: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸೋಂಕು ದೃಢಪಟ್ಟವರ ವಂಶವಾಹಿ ಪರೀಕ್ಷೆ ನಡೆಸಬೇಕು. ಜತೆಗೆ ಹೊಸತಾಗಿ ಗೋಚರವಾಗುವ ವೈರಸ್‌ನ ರೂಪಾಂತರಿಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಎಲ್ಲ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

Advertisement

ಅಮೆರಿಕ, ಚೀನ, ಜಪಾನ್‌, ದಕ್ಷಿಣ ಕೊರಿಯಾ, ಬ್ರೆಜಿಲ್‌ಗ‌ಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಸೋಂಕು ಪತ್ತೆ, ನಿಗಾ, ಚಿಕಿತ್ಸೆ ಮತ್ತು ಲಸಿಕೆ ಹಾಕುವುದು ಹೀಗೆ ಐದು ಹಂತದ ನಿಗಾ ಕ್ರಮಗಳನ್ನು ದೇಶಾದ್ಯಂತ ಕಟ್ಟೆಚ್ಚರದಿಂದ ಪಾಲಿಸಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವಜನಿಕವಾಗಿ ಇನ್ನೂ ಕೊರೊನಾ ದೂರವಾಗಿಲ್ಲ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ನೇತೃತ್ವದಲ್ಲಿ ಸಭೆ ಬುಧವಾರ ನವದೆಹಲಿಯಲ್ಲಿ ನಡೆಯಲಿದೆ

Advertisement

Udayavani is now on Telegram. Click here to join our channel and stay updated with the latest news.

Next