Advertisement

Covid 19; ಪ್ರವಾಸಿ ತಾಣಗಳನ್ನು ಬಂದ್ ಮಾಡುವ ಪರಿಸ್ಥಿತಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

01:13 PM Dec 22, 2023 | Team Udayavani |

ಮೈಸೂರು: ಕೋವಿಡ್‌ನಿಂದ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತಹ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಆದರೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಆರು ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಅವರಿಗೆ ಟ್ರಾವಲ್ ಹಿಸ್ಟರಿ ಇಲ್ಲ. ಅವರಿಗೆ ಬೇರೆ ಬೇರೆ ರೋಗದ ಹಿನ್ನಲೆಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಿ ಎಚ್ಚರಿಕೆಯಿಂದ ಇರಬೇಕು ಎಂದರು.

ಸಂಸತ್ ಸದಸ್ಯರ ಅಮಾನತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಇದು ಸರ್ವಾಧಿಕಾರದ ಪರಮಾವಧಿತನ. ಇವರಿಗೆ ಪ್ರಜಾಪ್ರಭುತ್ವದ ಯಾವ ಆಶಯಗಳ ಮೇಲೂ ನಂಬಿಕೆ ಇಲ್ಲ. ವಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳಲ್ಲವೆಂದರೆ ಏನರ್ಥ? ಜನ ಇವರ ನಡವಳಿಕೆ ಗಮನಿಸುತ್ತಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲವೆಂಬ ವಾತಾವರಣವನ್ನು ಬಿಜೆಪಿ ಸೃಷ್ಟಿಸುತ್ತಿದೆ. ಮುಂಬರುವ ಚುನಾವಣೆಯಲ್ಲೂ ಜನ ಇದನ್ನಲ್ಲಾ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದರು.

ಗರಂ ಆದ ಸಿಎಂ: ಸಚಿವ ಜಮೀರ್ ಜೊತೆ ಐಷಾರಾಮಿ ಜೆಟ್‌ ನಲ್ಲಿ ಪ್ರಯಾಣ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಥಟ್ಟನೆ ಗರಂ ಆದರು. ‘ಮೋದಿ ಯಾವ ಫ್ಲೈಟ್‌ ನಲ್ಲಿ ಓಡಾಡುತ್ತಾರೆ? ಅವರದು ಐಷಾರಾಮಿ ಫ್ಲೈಟ್ ಅಲ್ಲವೇ? ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂತಹದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next