Advertisement

2021ರ ಮಾರ್ಚ್ 31ರವರೆಗೂ 1 ರಿಂದ 8ನೇ ತರಗತಿ ಬಂದ್: ಈ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

01:39 PM Dec 06, 2020 | Mithun PG |

ಮಧ್ಯಪ್ರದೇಶ: ಕೋವಿಡ್ -19 ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, 1 ರಿಂದ 8ನೇ ತರಗತಿಯವರೆಗಿನ ಶಾಲೆಗಳನ್ನು 2021ರ ಮಾರ್ಚ್ 31 ರವರೆಗೂ ತೆರೆಯುವುದಿಲ್ಲ ಎಂದು ತಿಳಿಸಿದ್ದಾರೆ.

Advertisement

ಮಾತ್ರವಲ್ಲದೆ 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಪರೀಕ್ಷೆಗಳನ್ನು  ಎದುರಿಸಬೇಕಾಗಿಲ್ಲ. ಪ್ರೊಜೆಕ್ಟ್ ವರ್ಕ್ ಗಳ ಆಧಾರದ ಮೇಲೆ ಮೌಲ್ಯಮಾಪನ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಯೊಂದಿಗಿನ ಸಭೆಯ ಬಳಿಕ ಈ ತೀರ್ಮಾನ ಹೊರಡಿಸಲಾಗಿದ್ದು, 2021ರ ಮಾರ್ಚ್ 31ರವರೆಗೂ ಯಾವುದೇ ದೈನಂದಿನ ತರಗತಿಗಳನ್ನು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಲಾಗುವುದಿಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ.

ಇದನ್ನೂ ಓದಿ: ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಭೆ

ವಾರ್ಷಿಕ ಪರೀಕ್ಷೆಯ  ಹಿನ್ನಲೆಯಲ್ಲಿ ಶೀಘ್ರವಾಗಿ 10 ಮತ್ತು 12ನೇಯ ತರಗತಿಗಳನ್ನು ಆರಂಭಿಸಲಾಗುವುದು. ಆದರೇ ಕೋವಿಡ್ ಮಾರ್ಗಸೂಚಿಗಳನ್ನು ಮತ್ತು ಸಾಮಾಜಿಕ ಅಂತರಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. 9 ಮತ್ತು 11ನೇ ತರಗತಿಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಮ್ಮೆ ಅಥವಾ 2 ಬಾರಿಗೆ ತರಗತಿಗೆ ಹಾಜರಾಗುವಂತೆ ಆದೇಶ ಹೊರಡಿಸಲಾಗಿದೆ  ಎಂದು ಇದೇ ವೇಳೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ಮತ್ತೆ ಕರ್ನಾಟಕ ಬಂದ್! ಮತ್ತೊಂದು ಬಂದ್ ಗೆ ಕರೆಕೊಟ್ಟ ರಾಜ್ಯ ರೈತ ಸಂಘ

 

Advertisement

Udayavani is now on Telegram. Click here to join our channel and stay updated with the latest news.

Next