Advertisement

ಭಾರತದಲ್ಲಿ 11,451 ಕೋವಿಡ್ ಸೋಂಕು ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ.98

10:23 AM Nov 08, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 11,451 ನೂತನ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದ್ದು, 266 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,43,66,987ಕ್ಕೆ ತಲುಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ನವೆಂಬರ್ 08) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಚುಟುಕು ಮಾದರಿ ನಾಯುಕನಾಗಿ ಕೊಹ್ಲಿಗಿಂದು ವಿದಾಯ ಪಂದ್ಯ: ಕೋಚ್ ಶಾಸ್ತ್ರಿಗೂ ಅಂತಿಮ ಆಟ

ಕೋವಿಡ್ ಸೋಂಕಿನಿಂದ ಈವರೆಗೆ 4,61,057 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,204 ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಒಟ್ಟು 3,37,63.104 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ಹೇಳಿದೆ.

ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,019ರಷ್ಟು ಇಳಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,42,826ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ಕಳೆದ 262 ದಿನಗಳ ನಂತರ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.98.24ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next