Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 23,529 ಕೋವಿಡ್ ಪ್ರಕರಣ ಪತ್ತೆ, 28,718 ಮಂದಿ ಗುಣಮುಖ

11:57 AM Sep 30, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 23,529 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 311 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಸೆಪ್ಟೆಂಬರ್ 30) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಐಪಿಎಲ್ ನಿಂದ ಹೊರಬಿದ್ದ ಅರ್ಜುನ್ ತೆಂಡೂಲ್ಕರ್: ಮುಂಬೈಗೆ ಬದಲಿ ಆಟಗಾರನ ಸೇರ್ಪಡೆ

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,37,39,980ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,48,062ಕ್ಕೆ ಹೆಚ್ಚಲವಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

ಕೇರಳ ರಾಜ್ಯವೊಂದರಲ್ಲೇ 12,161 ಕೋವಿಡ್ ಪ್ರಕರಣ ವರದಿಯಾಗಿದ್ದು, 155 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24ಗಂಟೆಗಳಲ್ಲಿ 28,718 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ 3,30,14,898 ಮಂದಿ ಚೇತರಿಸಿಕೊಂಡಿದ್ದಾರೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,77,020ಕ್ಕೆ ತಲುಪಿದ್ದು, ಇದು ಕಳೆದ 195 ದಿನಗಳ ಬಳಿಕ ಪತ್ತೆಯಾದ ಕನಿಷ್ಠ ಪ್ರಕರಣವಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next