ನವದೆಹಲಿ: ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕೆ ಮಹಾ ಅಭಿಯಾನ ಇಂದಿನಿಂದ (ಜ.16) ಆರಂಭವಾಗಲಿದ್ದು, ಪ್ರಧಾನಿ ಮೋದಿ ಬೆಳಗ್ಗೆ10:30 ಕ್ಕೆ ವರ್ಚ್ಯುವಲ್ ಮೂಲಕ ಲಸಿಕೆ ವಿತರಣೆಯನ್ನು ಉದ್ಘಾಟಿಸಿ, ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಲಸಿಕೆ ವಿತರಣಾ ಅಭಿಯಾನ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 5ರವರೆಗೂ ನಡೆಯಲಿದ್ದು, ಮೊದಲ ದಿನವೇ ದೇಶಾದ್ಯಂತ 3,00,000 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನಿಡಲು ಉದ್ದೇಶಿಸಲಾಗಿದೆ. ಇದಕ್ಕಾಗಿ 3,006 ಲಸಿಕೆ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಪ್ರತಿದಿನ 100 ಜನರಿಗೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ವಿತರಣೆ ಮಾಡಲಾಗುವುದು. ಒಟ್ಟಾರೆ, 1.65 ಕೋಟಿ ಕೋವಿಡ್ ಡೋಸ್‌ಗಳನ್ನು ಕೇಂದ್ರ ಸರ್ಕಾರ ಖರೀದಿಸಿದೆ.
ಕೋವಿನ್ ಆ್ಯಪ್ಉದ್ಘಾಟನೆ ಮಾಡುವ ಮೂಲಕ ದೇಶದ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಆಯ್ದ ಲಸಿಕೆ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ ನಡೆಸಲಿದ್ದಾರೆ. ಮುಂದಿನ 10 ದಿನದೊಳಗೆ ಮೊದಲ ಹಂತದ ಅಭಿಯಾನ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇದನ್ನೂ ಓದಿ: ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ
ಕರ್ನಾಟಕದಲ್ಲೂ ಲಸಿಕಾ ಅಭಿಯಾನಕ್ಕೆ ಆರೋಗ್ಯ ಇಲಾಖೆ ರೆಡಿಯಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ಲಸಿಕಾ ಕೇಂದ್ರಗಳಲ್ಲಿ ಇಂದಿನಿಂದ ವ್ಯಾಕ್ಸಿನ್ ನೀಡಲಾಗುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 5 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಸರ್ಕಾರಿ ಹಾಗೂ ಖಾಸಗಿ ಮೆಡಿಕಲ್ ಕಾಲೇಜಿನಲ್ಲೂ ಲಸಿಕೆ ನೀಡಲಾಗುತ್ತದೆ.
ಈಗಾಗಲೇ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಎಲ್ಲಾ ರಾಜ್ಯಗಳಿಗೂ ತಲುಪಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಈಗ ಚುನಾವಣೆ ನಡೆದರೂ ಮೋದಿಯದ್ದೇ ಗೆಲುವು!