ನವದೆಹಲಿ: ಕೋವಿಡ್ 19 ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 09) ಮುಂಬಯಿಯಲ್ಲಿನ ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಲಸಿಕೆ ನೀಡುವಿಕೆ ಅಭಿಯಾನ ಸ್ಥಗಿತಗೊಳಿಸಲಾಗಿದೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಸಾಯಿ ಬಾಬಾರ ಮೊದಲ ಧನ್ವಂತರಿ ಮೂರ್ತಿ ಇರುವುದು ಇಲ್ಲೇ !!
ಕೋವಿಡ್ 19 ಲಸಿಕೆ ಕೊರತೆಯ ಹಿನ್ನೆಲೆಯಲ್ಲಿ ಮುಂಬಯಿ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಹೊಸದಾಗಿ ಕೋವಿಡ್ ಲಸಿಕೆ ಬಂದ ನಂತರ ಮತ್ತೆ ಲಸಿಕೆ ನೀಡುವಿಕೆ ಆರಂಭಿಸಲಾಗುವುದು ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ ಲಸಿಕೆ ಸಂಗ್ರಹದ ಲಭ್ಯತೆಗೆ ಅನುಗುಣವಾಗಿ ಮುಂಬಯಿ ನಾಗರಿಕರಿಗೆ ವ್ಯಾಕ್ಸಿನೇಷನ್ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುತ್ತದೆ. ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಸಿ ಹೇಳಿಕೆಯಲ್ಲಿ ವಿವರಿಸಿದೆ.
ಮಹಾನಗರ ಪಾಲಿಕೆ ಜುಲೈ 1ರಿಂದ ಪುರಸಭೆ ಮತ್ತು ಸರ್ಕಾರಿ ಕೇಂದ್ರಗಳಲ್ಲಿ ಕೋವಿಡ್ ಚುಚ್ಚು ಮದ್ದು ನೀಡುವ ಅಭಿಯಾನವನ್ನು ಸ್ಥಗಿತಗೊಳಿಸಿದ್ದು, ಕೋವಿಡ್ ಲಸಿಕೆ ಕೊರತೆ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.