Advertisement
ಕಳೆದ 24 ಗಂಟೆಗಳಲ್ಲಿ ಇಸ್ರೇಲ್‌ನಲ್ಲಿ 1630 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 99,599ಕ್ಕೆ ತಲುಪಿದೆ. ಇಲ್ಲಿಯ ವರೆಗೆ 795 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾಂಕ್ರಾಮಿಕ ಕುರಿತು ಚರ್ಚಿಸಲು ನಡೆದ ಸಂಪುಟ ಸಭೆ ನಡೆಸಿದ್ದರು. ಇದರಲ್ಲಿ ದೇಶದಲ್ಲಿ ಮತ್ತೆ ಲಾಕ್‌ಡೌನ್ ಹೇರದಿರಲು ನಿರ್ಧರಿಸಲಾಗಿತ್ತು. ಆದರೆ ಸುರಕ್ಷಾ ಕ್ರಮಗಳ ಬಗ್ಗೆ ಕಾಳಜಿ ವಹಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.
ಕಳೆದ 24 ಗಂಟೆಗಳಲ್ಲಿ ಮೆಕ್ಸಿಕೋದಲ್ಲಿ 6775 ಹೊಸ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಇಲ್ಲಿ ಸೋಂಕಿತರ ಸಂಖ್ಯೆ 543,806ಕ್ಕೆ ತಲುಪಿದೆ. ಬಿಡುಗಡೆಯಾದ ದತ್ತಾಂಶಕ್ಕಿಂತ ಸೋಂಕಿತರ ಸಂಖ್ಯೆ ಹೆಚ್ಚಿರಬಹುದು ಎಂದು ಸರಕಾರ ಹೇಳಿದೆ. ದೇಶದ ಆರೋಗ್ಯ ಸಚಿವಾಲಯದ ಪ್ರಕಾರ ದಿನಕ್ಕೆ 625 ಹೊಸ ಸಾವುಗಳು ದಾಖಲಾಗುತ್ತಿವೆ. ಬ್ರಿಟನ್
ದೇಶದ ಎರಡನೇ ಅತಿದೊಡ್ಡ ನಗರವಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಸೋಂಕು ಹೆಚ್ಚಾಗುತ್ತಿರುವ ಕಾರಣ ಯುಕೆ ಸರಕಾರ ಲಾಕ್‌ಡೌನ್ ಘೋಷಿಸಿದೆ. ಕಳೆದ ವಾರಕ್ಕೆ ಹೋಲಿಸಿದರೆ 1 ಲಕ್ಷ ಜನರ ಪರೀಕ್ಷೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಸೋಂಕು
ಪತ್ತೆಯಾಗಲು ಕಾರಣವಾದ ಅಂಶಗಳ ಮೇಲೆ ಸಮೀಕ್ಷೆ ನಡೆಸಲು ಸರಕಾರ ನಿರ್ಧರಿಸಿದೆ. ಈ ವರೆಗೆ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 41 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.