Advertisement

ಮಾರ್ಚ್ 16ರಿಂದ 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ: ಕೇಂದ್ರ ಸರ್ಕಾರ

04:35 PM Mar 14, 2022 | Team Udayavani |

ನವದೆಹಲಿ: 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 16ರಿಂದ ಕೋವಿಡ್ ಲಸಿಕೆ ನೀಡಲಾಗುವುದು. ಅಲ್ಲದೇ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ ಸುಖ್ ಮಾಂಡವೀಯಾ ಸೋಮವಾರ (ಮಾರ್ಚ್ 14)ಘೋಷಿಸಿದ್ದಾರೆ.

Advertisement

ಇದನ್ನೂ ಓದಿ:ಗೋವಾ: ದಿ ಕಾಶ್ಮೀರ್ ಫೈಲ್ಸ್” ಪೋಸ್ಟರ್ ಹಾಕಲಿಲ್ಲ ಎಂದು ಸಿಬ್ಬಂದಿಗಳಿಗೆ ಥಳಿತ

ಒಂದು ವೇಳೆ ಮಕ್ಕಳು ಸುರಕ್ಷಿತರಾಗಿದ್ದರೆ, ನಂತರ ದೇಶವೂ ಸುರಕ್ಷಿತವಾದಂತೆ ಎಂಬುದಾಗಿ ಮನ್ ಸುಖ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಮಕ್ಕಳಿಗೆ ಲಸಿಕೆ ನೀಡಲು ಪೋಷಕರು ಮುತುವರ್ಜಿ ವಹಿಸಬೇಕು ಮತ್ತು 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಲಸಿಕೆ ಪಡೆಯಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

12ರಿಂದ 13 ವರ್ಷದವರು, 13ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ. 2021ರ ಏಪ್ರಿಲ್ 1ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಆರಂಭಿಸಿತ್ತು. ಮೇ 1ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next