Advertisement

ಕೋವಿಡ್-19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ

06:00 PM Apr 16, 2020 | keerthan |

ಬೆಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ 66 ವರ್ಷದ ವ್ಯಕ್ತಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

Advertisement

ಸೋಂಕಿತ ಸಂಖ್ಯೆ 195 ಎಂದು ಗುರುತಿಸಲಾಗಿದ್ದ ವ್ಯಕ್ತಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ವೇಳೆಗೆ ಮೃತನಾಗಿದ್ದಾನೆ. 66 ವರ್ಷದ ಈತ ಮೊದಲು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಂತರ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.

ಏಪ್ರಿಲ್ 10ರಿಂದ ಈ ಸೋಂಕಿತ ವ್ಯಕ್ತಿ ವೆಂಟಿಲೇಟರ್ ನಲ್ಲಿದ್ದ ಎನ್ನಲಾಗಿದೆ. ಬುಧವಾರ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೇ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕು ಹರಡದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕಳೆದ ಕೆಲವು ದಿನಗಳಿಂದ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಸಾವಿನ ಸಂಖ್ಯೆಯಲ್ಲೂ ವೇಗದ ಏರಿಕೆಯಾಗುತ್ತಿದ್ದು, ಕಳವಳಕ್ಕೆ ಕಾರಣವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next