ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟ ವಿಚಾರವನ್ನು ಹಂಚಿಕೊಂಡಿದ್ದು, ಸಾರ್ವಜನಿಕರಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ , ಮಾಸ್ಕ್ , ಹಾಗೂ ಕೈಗಳನ್ನು ತೊಳೆಯುವಂತೆ ಮನವಿ ಮಾಡಿಕೊಂಡಿದ್ದಾರೆ.
ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು ಶಾಸಕರು ಸ್ವಯಂ ಪ್ರೇರಿತವಾಗಿ ತಪಾಸಣೆ ನಡೆಸಿದ ವೇಳೆ ದೃಢಪಟ್ಟಿದೆ.
ಶಾಸಕರು ನಗರದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು ಈ ಕುರಿತು ಅಧಿಕಾರಿಗಳು ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.
Related Articles
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಭೀತಿ ಸಾರ್ವಜನಿಕರಲ್ಲಿ ಮನೆಮಾಡಿದ್ದು ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಕೂಡಾ ಹೆಚ್ಚಾಗುತ್ತಿದೆ.