Advertisement

ರಾಜ್ಯದಲ್ಲಿ ಕೋವಿಡ್ 19 ವೈರಸ್ ಸೋಂಕು ಶಂಕಿತ ವೃದ್ಧೆ ಸಾವು

11:09 AM Mar 27, 2020 | Hari Prasad |

ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರಿನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ 70 ವರ್ಷ ಪ್ರಾಯದ ವೃದ್ಧೆಯೊಬ್ಬರು ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಆಸ್ಪತ್ರೆಯಲ್ಲಿ ಮೃತಪಟ್ಟದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಕಳವಳಕ್ಕೆ ಕಾರಣವಾಗಿದೆ.

Advertisement

ಚಿಕ್ಕಬಳ್ಳಾಪುರದಲ್ಲಿ ಮೂರು ಕೋವಿಡ್ 19 ಸೋಂಕು ಪತ್ತೆಯಾಗಿದ್ದ ಆ ಕುಟುಂಬಕ್ಕೆ ಸಂಬಂಧಿಸಿದವರು ಇವರಾಗಿದ್ದರು ಎಂಬ ಮಾಹಿತಿ ಇದೀಗ ಲಭಿಸಿದ್ದು ಈ ವೃದ್ಧೆ ಮಕ್ಕಾ ಪ್ರವಾಸದಿಂದ ಹಿಂದಿರುಗಿದ್ದರು. ಆ ಬಳಿಕ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದರು.

ಮಂಗಳವಾರ ರಾತ್ರಿ ಈ ವೃದ್ಧೆಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೃದ್ಧೆಯ ಆರೋಗ್ಯ ಬಿಗಡಾಯಿಸಿದ ಕಾರಣ ಅವರನ್ನು ತಕ್ಷಣವೇ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆಯ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿ ಇಂದು ಮೃತಪಟ್ಟಿದ್ದಾರೆ.

ಈ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ಅವರನ್ನು ನಿನ್ನೆ ಬೌರಿಂಗ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಈ ಮಹಿಳೆ ಇಂದು ರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಈ ಮಹಿಳೆ ಮಧುಮೇಹ, ಎದೆನೋವು, ಹಾಗೂ ಪೃಷ್ಠಭಾಗದ ಮುರಿತದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಮಹಿಳೆಯ ಸಾವಿಗೆ ಕೋವಿಡ್ 19 ಸೋಂಕು ಕಾರಣವೇ ಎಂಬುದು ಪರೀಕ್ಷಾ ವರದಿಗಳ ಬಳಿಕವೇ ಖಚಿತವಾಗಬೇಕಿದ ಎಂಬ ಮಾಹಿತಿಯನ್ನೂ ಸಹ ಸಚಿವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.

Advertisement

ಇವರ ಗಂಟಲು ದ್ರವದ ಮಾದರಿಯನ್ನು ಈಗಾಗಲೇ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು ಮತ್ತು ಇದರ ವರದಿ ಇನ್ನಷ್ಟೇ ಕೈಸೇರಬೇಕಾಗಿದೆ. ಈ ನಡುವೆ ವೃದ್ಧೆ ಮೃತಪಟ್ಟಿರುವುದರಿಂದ ಕೋವಿಡ್ 19 ಸೋಂಕಿನಿಂದಲೇ ಈ ಸಾವು ಸಂಭವಿಸಿರಬುದೆಂದು ಇದೀಗ ಶಂಕಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next