ಮಂಗಳೂರು: ಕೋವಿಡ್-19 ಸೋಂಕು ತನ್ನ ಜಾಡನ್ನು ಮತ್ತಷ್ಟು ಬೆಳೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್-19 ಸೋಂಕಿನ ಕಾರಣದಿಂದ ಮರಣ ಹೊಂದಿದವರ ಸಂಖ್ಯೆ 10ಕ್ಕೇರಿದೆ.
ಇಂದು ಬಂಟ್ವಾಳ ಮೂಲದ ಮಹಿಳೆ ಮತ್ತು ಸುರತ್ಕಲ್ ಮೂಲದ ಯುವಕ ಕೋವಿಡ್-19 ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಬಂಟ್ವಾಳದ 57 ವರ್ಷದ ಮಹಿಳೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸುರತ್ಕಲ್ ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೋವಿಡ್-19 ಸೋಂಕಿನ ಕಾರಣದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ಸೋಂಕಿನ ಕಾರಣದಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಕೋವಿಡ್ ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.