ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರು ಸಂಖ್ಯೆಯಲ್ಲಿ ಇಂದು ಮತ್ತೆ ಹೆಚ್ಚಳ ಕಂಡಿದೆ. ಇಂದು ರಾಜ್ಯದಲ್ಲಿ ಮತ್ತೆ 176 ಜನರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ 42 ಜನರಿಗೆ ಸೋಂಕು ದೃಢವಾಗಿದೆ. ಯಾದಗಿರಿ ಜಿಲ್ಲೆಯಲ್ಲಿ 22 ಜನರಿಗೆ ಸೋಂಕು ದೃಢವಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ ಜನರಿಗೆ 21 ಕೋವಿಡ್-19 ಸೋಂಕು ಪತ್ತೆಯಾಗಿದೆ.
ಬೀದರ್ ನಲ್ಲಿ 20 ಜನರಿಗೆ ಸೋಂಕು ತಾಗಿದ್ದರೆ, ಕಲಬುರಗಿಯಲ್ಲಿ 13, ಧಾರವಾಡದಲ್ಲಿ 10, ಬಳ್ಳಾರಿಯಲ್ಲಿ ಎಂಟು, ಕೋಲಾರದಲ್ಲಿ ಏಳು, ಉತ್ತರ ಕನ್ನಡ ಜಲ್ಲೆಯಲ್ಲಿ ಆರು, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ಐವರಿಗೆ ಸೋಂಕು ತಾಗಿರುವುದು ದೃಢವಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ನಾಲ್ಕು ಮಂದಿಗೆ ಸೋಂಕು ತಾಗಿದ್ದರೆ, ರಾಮನಗರದಲ್ಲಿ ಮೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ಇಬ್ಬರಿಗೆ., ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ ಮತ್ತು ಹಾವೇರಿಯಲ್ಲಿ ತಲಾ ಒಂದು ಕೋವಿಡ್ ಪ್ರಕರಣಗಳು ದೃಢವಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 312 ಮಂದಿ ಗುಣಮಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 3955 ಮಂದಿ ಸೋಂಕಿತರು ಬಿಡುಗಡೆಯಾಗಿ ಮನೆಗೆ ಮರಳಿದ್ದಾರೆ. ಇಂದು ಸೋಂಕಿನ ಕಾರಣದಿಂದ ಒಟ್ಟು ಐದು ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 86ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಮೂವರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.