Advertisement
2ನೇ ಅಲೆ ಬಾರದಂತೆ ತಡೆಯಲು ಗಡಿ ಮತ್ತು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪರೀಕ್ಷೆ ಹೆಚ್ಚಳ, ನಿಯಮಗಳ ಕಟ್ಟುನಿಟ್ಟು ಪಾಲನೆ ಸಹಿತ ಹಲವು ಕ್ರಮಗಳನ್ನು ಸರಕಾರ ಕೈಗೊಂಡಿದೆ. ಮಾ. 11ರಂದು ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ ಅಭಿಪ್ರಾಯ ಪಡೆಯಲಾಗಿದೆ. ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೆಂಗಳೂರು ಸಹಿತ ವಿವಿಧೆಡೆ ಪರೀಕ್ಷೆ ಹೆಚ್ಚಿಸಬೇಕು. ದಕ್ಷಿಣ ಕನ್ನಡ, ಉಡುಪಿ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೋಂಕುಪೀಡಿತರ ಸಂಪರ್ಕಿತರ ತ್ವರಿತ ಪತ್ತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ.
ಕೇರಳ, ಮಹಾರಾಷ್ಟ್ರಗಳಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ಗಡಿ ಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಎಲ್ಲ ಜಿಲ್ಲೆಗಳು ನಿತ್ಯ ಇಂತಿಷ್ಟು ಮಂದಿಗೆ ಲಸಿಕೆ ನೀಡಬೇಕು ಎಂದು ಗುರಿ ನೀಡಲಾಗಿದೆ. ಸಭೆ, ಸಮಾರಂಭಕ್ಕೆ ಜನ-ಮಿತಿ
ಸಭೆ ಸಮಾರಂಭಗಳಲ್ಲಿ ಜನರ ಭಾಗವಹಿಸುವಿಕೆಗೆ ಮಿತಿ ಹೇರಲಾಗಿದೆ. ಕಡ್ಡಾಯವಾಗಿ ಮೂರು ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ.
Related Articles
ಕೊರೊನಾ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡು ಸಿಎಂ ಬಿಎಸ್‌ವೈ ಲಸಿಕೆ ಹಾಕಿಸಿ ಕೊಂಡಿದ್ದು, ರಾಜ್ಯದ ಜನತೆಗೆ ಪ್ರೇರಣೆ ನೀಡಿದ್ದಾರೆ. ಶುಕ್ರವಾರ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆದರು. ಆರೋಗ್ಯ ಸಚಿವ ಡಾ| ಸುಧಾಕರ್ ಕೂಡ ಲಸಿಕೆ ಪಡೆದುಕೊಂಡಿದ್ದಾರೆ.
Advertisement