Advertisement

ಕೋವಿಡ್ ಮುನ್ನೆಚ್ಚರಿಕೆ ವಹಿಸಲು ಕಾರ್ಮಿಕರಿಗೆ ಸಲಹೆ

05:12 PM May 26, 2020 | Suhan S |

ಕಲಬುರಗಿ: ತಾಲೂಕಿನ ಹೊನ್ನ ಕಿರಣಗಿಯಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ಡಾ| ಉಮೇಶ ಜಾಧವ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ, ಕೋವಿಡ್ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

Advertisement

ಹೊನ್ನಕಿರಣಗಿ ಗ್ರಾ.ಪಂನಲ್ಲಿ 500 ಜನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ಥಳದಲ್ಲಿ 130 ಜನ ಕ್ಷೇತ್ರಬದು ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇನಕಾ ಜಾಧವ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮಾತನಾಡಿ, ಕೋವಿಡ್‌-19 ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ 10 ಕಿ.ಲೋ ಅಕ್ಕಿ ವಿತರಿಸುವಂತೆ ಸಂಸದರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಈ ಕುರಿತು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಜೊತೆಗೆ ಕೂಲಿ ಕಾರ್ಮಿಕರಿಗೆ ಸ್ಥಳದಲ್ಲಿಯೇ ಅನ್ನ, ಬೇಳೆ ಮುಂತಾದ ಪೌಷ್ಟಿಕತೆಯುಳ್ಳ ಊಟ ನೀಡುವಂತೆಯೂ ಪಿಡಿಒಗೆ ಸೂಚಿಸಿದರು.  ನಂತರ ಈ ಕುರಿತು ತಹಶೀಲ್ದಾರ್‌ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಕುಡಿಯಲು ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡುತ್ತಿರುವುದನ್ನು ಗಮನಿಸಿದ ಸಂಸದರು ನಿತ್ಯ ತಣ್ಣನೆಯ, ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.

ಕಲಬುರಗಿ ತಾಲೂಕು ಪಂಚಾಯತಿ ಅಧ್ಯಕ್ಷ ಶಿವರಾಜ ಸಜ್ಜನ್‌, ಹೊನ್ನ ಕಿರಣಗಿ ಗ್ರಾ.ಪಂ ಅಧ್ಯಕ್ಷೆ ಜಗದೇವಿ ಗುರು ಜುಲಿ , ತಾ.ಪಂ ಇಒ ಮಾನಪ್ಪ ಕಟ್ಟಿಮನಿ, ಗ್ರಾ.ಪಂ. ಸದಸ್ಯರಾದ ಪ್ರಕಾಶ ಖಾಬಾ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next