Advertisement

ಕೋವಿಡ್ 19 ಎಫೆಕ್ಟ್:ಮಹಾರಾಷ್ಟ್ರದಲ್ಲಿ ಎಷ್ಟು ಲಕ್ಷ ಜನ ಕ್ವಾರಂಟೈನ್ ನಲ್ಲಿ ಇದ್ದಾರೆ ಗೊತ್ತಾ

11:13 AM Jun 06, 2020 | Nagendra Trasi |

ಮುಂಬೈ:ಮಹಾರಾಷ್ಟ್ರದಲ್ಲಿ ಈವರೆಗೆ 80,229 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 2,849ಕ್ಕೆ ಏರಿಕೆಯಾಗಿದೆ. ಅಲ್ಲದೇ ರಾಜ್ಯದಲ್ಲಿ ಒಟ್ಟು 5,60.303 ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಗೃಹ ಸಚಿವ ಅನಿಲ್ ದೇಶ್ ಮುಖ್ ತಿಳಿಸಿದ್ದಾರೆ.

Advertisement

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಸಚಿವರು ತಿಳಿಸಿರುವ ಪ್ರಕಾರ, ಮಹಾರಾಷ್ಟ್ರದಲ್ಲಿ 80,229 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಮಾರ್ಚ್ ತಿಂಗಳಲ್ಲಿ ಲಾಕ್ ಡೌನ್ ಜಾರಿಯಾದ ದಿನದಿಂದ ಪೊಲೀಸರು 4,53,477 ಅಗತ್ಯ ಸೇವೆಗಳ ವಾಹನಗಳಿಗೆ ಪಾಸ್ ನೀಡಿದ್ದಾರೆ ಎಂದು ದೇಶ್ ಮುಖ್ ಹೇಳಿದರು. ಒಟ್ಟು 1,22,772 ಅಪರಾಧಗಳು ದಾಖಲಾಗಿದೆ. ಮಾರ್ಚ್ 22ರಿಂದ ಜೂನ್ 4ರ ನಡುವೆ 23,827 ಜನರನ್ನು ಬಂಧಿಸಲಾಗಿದೆ. ಒಟ್ಟು 6.42ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next