Advertisement

ಕೋವಿಡ್ ಏರ್ ಲಿಫ್ಟ್: ಬೆಂಗಳೂರಿಗೆ ಬಂದಿಳಿದ ಮೊದಲ ವಿಮಾನ, 325 ಭಾರತೀಯರು ಮರಳಿ ತವರಿಗೆ

08:32 AM May 12, 2020 | keerthan |

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ವಿದೇಶಗಳಲ್ಲಿ ಸಂಕಷ್ಟ ಅನುಭವಿಸುತ್ತಿರುವ ಭಾರತೀಯರನ್ನು ಏರ್ ಲಿಫ್ಟ್ ಮಾಡುವ ಕೆಲಸ ನಡೆಯುತ್ತಿದೆ. ಇದೇ ಪ್ರಕ್ರಿಯೆಯಲ್ಲಿ ಲಂಡನ್ ನಲ್ಲಿರುವ ಭಾರತೀಯರನ್ನು ಹೊತ್ತು ತಂದ ವಿಮಾನ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಬಂದಿಳಿದಿದೆ.

Advertisement

ಕೇಂದ್ರ ಸರ್ಕಾರದ ಯೋಜನೆಯಂತೆ ವಿದೇಶದಲ್ಲಿರುವ ಭಾರತೀಯರನ್ನು ಈ ಸಂಕಷ್ಟದ ಸಮಯದಲ್ಲಿ ತವರು ನೆಲಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಈ ಐತಿಹಾಸಿಕ ಏರ್ ಲಿಫ್ಟ್ ನ ಮೊದಲ ಹಂತದಲ್ಲಿ 64 ವಿಮಾನಗಳಲ್ಲಿ ಅವರನ್ನು ಭಾರತಕ್ಕೆ ಕರೆಸಿಕೊಳ್ಳಲಾಗುತ್ತಿದೆ. ಈ ಯೋಜನೆಯಲ್ಲಿ ಬೆಂಗಳೂರಿಗೆ ಇಂದು ಮೊದಲ ವಿಮಾನ ಬಂದಿಳಿದಿದೆ.

ಲಂಡನ್ ನಿಂದ ಹೊರಟ ಈ ವಿಮಾನ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸುಮಾರು 325 ಅನಿವಾಸಿ ಭಾರತೀಯರನ್ನು ಈ ವಿಮಾನದ ಮೂಲಕ ಕರೆದುಕೊಂಡು ಬರಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದ್ದು, ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿಕೊಳ್ಳಲಾಗಿದೆ. ಇವರು ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿದೆ. ಹೀಗಾಗಿ ಹೋಟೆಲ್ ಗಳನ್ನು ಬಳಸಲಾಗುತ್ತಿದ್ದು, ಅಲ್ಲಿಯೇ ಕ್ವಾರಂಟೈನ್ ಮಾಡಲಾಗುತ್ತಿದೆ. ಕ್ವಾರಂಟೈನ್ ವೆಚ್ಚವನ್ನು ಅವರೇ ಭರಿಸಬೇಕಾಗುತ್ತದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next