Advertisement

ದೆಹಲಿಯಲ್ಲಿ 85 ಕೋವಿಡ್ 19 ಪ್ರಕರಣ ಪತ್ತೆ; 2021ರಲ್ಲಿ ವರದಿಯಾದ ಅತೀ ಕಡಿಮೆ ಪ್ರಮಾಣ

07:36 PM Jun 26, 2021 | Team Udayavani |

ನವದೆಹಲಿ:ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಶನಿವಾರ(ಜೂನ್ 26) ಕೇವಲ 85 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದು 2021ನೇ ವರ್ಷದಲ್ಲಿ ವರದಿಯಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ. ಕೋವಿಡ್ ನಿಂದ 9 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ದಕ್ಷಿಣ ಕನ್ನಡ ಜಿಲ್ಲೆ : 567 ಮಂದಿ ಗುಣಮುಖ, 375 ಹೊಸ ಪ್ರಕರಣ ದೃಢ; 14 ಮಂದಿ ಸಾವು

ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇ.0.12ಕ್ಕೆ ಇಳಿಕೆಯಾಗಿದೆ. ಶನಿವಾರ ಕೋವಿಡ್ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 24,961ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಕಳೆದ ಸೋಮವಾರ ದೆಹಲಿಯಲ್ಲಿ 89 ಕೋವಿಡ್ 19 ಪ್ರಕರಣ ವರದಿಯಾಗಿದ್ದು, 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಪಾಸಿಟಿವಿಟಿ ದರ ಶೇ.0.16ಕ್ಕೆ ಇಳಿಕೆಯಾಗಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಫೆಬ್ರುವರಿ 16ರಂದು ಕೋವಿಡ್ 19 ದೃಢಪಟ್ಟಿದ್ದ 94 ಮಂದಿಗೆ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿಸಿದೆ.

ಬುಧವಾರ ದೆಹಲಿಯಲ್ಲಿ 111 ಪ್ರಕರಣ ಪತ್ತೆಯಾಗಿದ್ದು, ಏಳು ಮಂದಿ ಸಾವನ್ನಪ್ಪಿದ್ದರು. ಪಾಸಿಟಿವಿಟಿ ದರ ಶೇ.0.15ರಷ್ಟಿತ್ತು. ಗುರುವಾರ 109 ಕೋವಿಡ್ 19 ಪ್ರಕರಣ ವರದಿಯಾಗಿದ್ದು, ಎಂಟು ಮಂದಿ ಸಾವನ್ನಪ್ಪಿದ್ದರು ಎಂದು ಸಚಿವಾಲಯ ಮಾಹಿತಿ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next