ನವದೆಹಲಿ:ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡಿದ್ದು, 54,069 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಅಲ್ಲದೇ 1,321 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜೂನ್ 24) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಎಂಬಿಇಡಿ ಜಾರಿಗೆ ಕೇಂದ್ರ ಚಿಂತನೆ : ವಿದ್ಯುತ್ ಬಿಲ್‌ಗೆ ಬೀಳಲಿದೆ ಕತ್ತರಿ !
ದೇಶದಲ್ಲಿ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 30,082,778ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,91,981ಕ್ಕೆ ಹೆಚ್ಚಳವಾಗಿದೆ.
ಜೂನ್ 23ರವರೆಗೆ ಒಟ್ಟು 39,78,32,667 ಮಂದಿಯ ಕೋವಿಡ್ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಇದರಲ್ಲಿ ಬುಧವಾರ(ಜೂನ್ 23) 18,59,469 ಜನರನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ. ಸತತ 42 ದಿನಗಳ ಕಾಲದಿಂದ ಚೇತರಿಕೆ ಪ್ರಮಾಣ ಹೆಚ್ಚಳವಾಗಿರುವುದಾಗಿ ತಿಳಿಸಿದೆ.
ಬುಧವಾರ ದೇಶದಲ್ಲಿ 50,848 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಆದರೆ ಬುಧವಾರ ಸಾವಿನ ಸಂಖ್ಯೆ ಸ್ವಲ್ಪ ಹೆಚ್ಚಳವಾಗಿದ್ದು (1358), ಗುರುವಾರ 1,321 ಸಾವನ್ನಪ್ಪಿದ್ದಾರೆ.