Advertisement

ಕಲ್ಲೂರಲ್ಲಿ ಕೋವಿಡ್ ಜಾಗೃತಿ

08:25 AM May 24, 2020 | mahesh |

ರಾಮದುರ್ಗ: ಅಂತಾರಾಜ್ಯಗಳಿಂದ ತಾಲೂಕಿಗೆ ಆಗಮಿಸಿದ ಜನರಿಂದ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕದ ಸಂಗತಿಯಾಗಿದೆ. ಕಾರಣ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪರಸ್ಥಳದಿಂದ ಬಂದ ಜನರ ಮಾಹಿತಿ ಸಂಗ್ರಹಿಸುವ ಕೆಲಸವನ್ನು ಜಾಗೃತಿಯಿಂದ ನಿರ್ವಹಿಸಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

Advertisement

ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಕೋವಿಡ್ ಸೋಂಕು ದೃಢಪ್ಪಟ ಹಿನ್ನೆಲೆಯಲ್ಲಿ ಶನಿವಾರ ತಾಲೂಕಾಡಳಿತದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿವಳಿಕೆ ನೀಡಿದರು. ಹೊರಗಿನ ಯಾರೋ ವ್ಯಕ್ತಿಗಳು ಬಂದರು ಶೀಘ್ರದಲ್ಲಿಯೇ ತಾಲೂಕು ಆಡಳಿತಕ್ಕೆ ಮಾಹಿತಿ ತಲುಪಿಸಬೇಕು. ಒಂದು ವೇಳೆ ಕಾರ್ಯಕ್ಕೆ ಅಡ್ಡಿ ಪಡಿಸಿದರೆ ಅಂಥವರ ವಿರುದ್ಧ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಲು ಮನೆಗೆ ಬಂದಾಗ ಜನತೆ ಸಂಪೂರ್ಣ ಸಹಕಾರ ನೀಡಬೇಕು. ಸರಕಾರ ತೆಗೆದುಕೊಂಡ ಕ್ರಮಗಳನ್ನು ಎಲ್ಲರೂ ಪಾಲಿಸಿದರೆ ಮಾತ್ರ ಕೊರೊನಾ ವೈರಸ್‌ ತಡೆಗಟ್ಟಲು ಸಾಧ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಪಂ ಸದಸ್ಯ ರೇಣಪ್ಪ ಸೋಮಗೊಂಡ, ತಹಶೀಲ್ದಾರ್‌ ಗಿರೀಶ ಸ್ವಾದಿ, ತಾಪಂ ಇಒ ಮುರಳೀದರ ದೇಶಪಾಂಡೆ, ಸಿಪಿಐ ಲಖನ್‌ ಮುಸಗುಪ್ಪಿ, ಪಿಎಸ್‌ಐ ಆನಂದ ಡೋಣಿ, ಗ್ರಾಮದ ಪ್ರಮುಖರಾದ ಅರ್ಜುನ ಜಾಧವ, ಸಿದ್ದಪ್ಪ ಪೂಜೇರ, ಮುಳ್ಳೂರ ಪಿಡಿಒ ಮಾಲತೇಶ ದಾಸಪ್ಪನವರ, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next