Advertisement

ಕೋವಿಡ್‌ ಜಾಗೃತಿಗೆ ರಸ್ತೆಗಿಳಿದ ನ್ಯಾಯಾಧೀಶರು

03:10 PM Nov 14, 2020 | Suhan S |

ಬಾಗಲಕೋಟೆ: ನವನಗರದ ಎಸ್‌ಬಿಐ ಬ್ಯಾಂಕ್‌, ಪೆಟ್ರೋಲ್‌ ಬಂಕ್‌ ಹತ್ತಿರ ಹಾಗೂ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಕೋವಿಡ್‌-19 ಕುರಿತು ಜಾಗೃತಿ ಮೂಡಿಸಿದರು.

Advertisement

ಶುಕ್ರವಾರ ಜಿಲ್ಲಾ ನ್ಯಾಯಾಲಯ, ಆರೋಗ್ಯ ಇಲಾಖೆ, ಪೊಲೀಸ್‌ ಹಾಗೂ ವಕೀಲರ ಸಂಘದಸಹಯೋಗದಲ್ಲಿ ಕೋವಿಡ್‌-19 ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಕಾರ್ಯಕ್ರಮದಲ್ಲಿಮಾಸ್ಕ್ ಹಾಕಿಕೊಳ್ಳದೇ ಸಂಚರಿಸುತ್ತಿರುವ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿ ಕೋವಿಡ್‌  ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತ ಕ್ರಮಗಳ ಕುರಿತು ಕರಪತ್ರ ವಿತರಿಸಿದರು.

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ನಡೆದಾಡುತ್ತಿರುವ ವೃದ್ಧರಿಗೆ, ಮಕ್ಕಳಿಗೆ ಹಾಗೂ ಆಟೋ ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕರಿಗೆ ಮಾಸ್ಕ್ಗಳನ್ನು ವಿತರಿಸಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸುವಂತೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ಕೋವಿಡ್‌-19 ಅರಿವು ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಹೇಮಲತಾ ಹುಲ್ಲೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎ.ಎನ್‌.ದೇಸಾಯಿ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ|ಬಿ.ಜಿ.ಹುಬ್ಬಳ್ಳಿ, ಸಹಾಯಕ ಸರಕಾರಿ ಅಭಿಯೋಜಕಿ ಶಾರದಾ ಬದಾಮಿ, ನಗರಸಭೆ ಪೌರಾಯುಕ್ತ ಮುನಿಶ್ಯಾಮಪ್ಪ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್‌.ಕಡಕೋಳ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next