Advertisement

ಬೀದಿನಾಟಕ ಪ್ರದರ್ಶಿಸಿ ಕೋವಿಡ್ ಜಾಗೃತಿ

02:07 PM Aug 25, 2020 | Suhan S |

ಶಿಡ್ಲಘಟ್ಟ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಮತ್ತು ಪರಿಸರ ಕಾಪಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕು ನಿಯಂತ್ರಿಸಲು ಜನರಿಗೆ ಬೀದಿ ನಾಟಕದ ರೂಪದಲ್ಲಿ ಮನದಟ್ಟು ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮಾರ್‌ ತಿಳಿಸಿದರು.

Advertisement

ತಾಲೂಕಿನ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಕೋವಿಡ್, ಸ್ವಚ್ಛತೆ ಮತ್ತು ಪರಿಸರ ಕುರಿತ ಜಾಗೃತಿ ಮೂಡಿಸುವ ಬೀದಿ ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ ಸಾಮಾನ್ಯವಾದ ರೋಗವಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಬದಲಾಗಿ ಜಾಗೃತರಾಗಿರಬೇಕು. ಜೀವನ ಶೈಲಿ ಮತ್ತು ಆಹಾರದ ಪದ್ಧತಿ ಬದಲಾಯಿಸಿ ಕೊಂಡು ನಿಯಂತ್ರಿಸಲು ಪ್ರಯತ್ನಿಸಬೇಕೆಂದರು.

ಬೇರು ಬೆವರು ಕಲಾ ತಂಡದಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಾರ್ವಜನಿಕರು ಅನುಸರಿಸ ಬೇಕಾದ ಎಚ್ಚರಿಕೆ ಕ್ರಮಗಳು ಸೇರಿದಂತೆ ಕೋವಿಡ್ ಸೋಂಕು ಉಂಟು ಮಾಡುತ್ತಿರುವ ಹಾನಿಯ ಕುರಿತು ಸಾರ್ವಜನಿಕರಿಗೆ ನಾಟಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು. ನಮ್ಮ ಮನೆ ಹಾಗೂ ಸುತ್ತಮುತ್ತ ಸ್ವಚ್ಛವಾಗಿರಿಸಿ ಕೊಳ್ಳಬೇಕಾದ ಅಗತ್ಯ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಿದರು.

ಶಿಡ್ಲಘಟ್ಟ ತಾಲೂಕಿನ ದೊಡ್ಡದಾಸರಹಳ್ಳಿ ಮತ್ತು ನಗರದ ಸಿದ್ಧಾರ್ಥ ನಗರದ ಶಾಲೆಯ ಬಳಿ ಬೇರು ಬೆವರು ಕಲಾ ತಂಡದವರು ಜನಜಾಗೃತಿ ಬೀದಿ ನಾಟಕ ಪ್ರದರ್ಶಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ. ಎಂ.ತ್ಯಾಗರಾಜ್‌, ಮಹಿಳಾ ಜ್ಞಾನವಿಕಾಸ ಅಧಿಕಾರಿ ಲಕ್ಷ್ಮೀ, ಸೇವಾಪ್ರತಿನಿಧಿ ಲಾವಣ್ಯ, ಲಕ್ಷ್ಮೀ, ಬೇರು ಬೆವರು ಕಲಾ ತಂಡದ ಮಹೇಶ್‌, ಚಂದ್ರಶೇಖರ್‌, ಚಿ.ಮು. ಹರೀಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next