Advertisement

ಜುಲೈನಲ್ಲಿ ಕೋವಿಡ್‌ 19 ಸ್ಫೋಟ!

06:38 AM Jun 10, 2020 | Lakshmi GovindaRaj |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಕೋವಿಡ್‌ 19 ಸೋಂಕಿತರ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ತಜ್ಞರು ಹಾಗೂ ಪರಿಣಿತರು ತಮಗೆ ವರದಿ ನೀಡಿದ್ದಾರೆ. ಈ ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ  ಎಂದು  ರಾಜ್ಯ ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್‌ ತಿಳಿಸಿದರು.

Advertisement

ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಜಿಲ್ಲಾ ಕೋವಿಡ್‌-19 ಆಸ್ಪತ್ರೆಗೆ ಬೆಂಗಳೂರಿನ ಲ್ಯಾಮ್‌ ರೀಸರ್ಚ್‌ ಪ್ರೈ.ಲಿ ನೀಡಿರುವ ಗಂಟಲು ದ್ರವ ಪರೀಕ್ಷಾ ಘಟಕ ಉದ್ಘಾಟಿಸಿ  ಮಾತನಾಡಿದ ಸಚಿವರು, ಜಗತ್ತಿನ ಇತರೆ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ನಾವು ಸುರಕ್ಷಿತವಾಗಿದ್ದೇವೆ. ನಮಗಿಂತ ಕಡಿಮೆ ಜನಸಂಖ್ಯೆ ಇರುವ ದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೃತಪಟ್ಟಿದ್ದಾರೆ ಎಂದರು.

ಜುಲೈ ತಿಂಗಳಲ್ಲಿ  ಸೋಂಕಿತರ ಸಂಖ್ಯೆ ಹೆಚ್ಚಾಗುವ ಬಗ್ಗೆ ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಪರಾಮರ್ಶೆ ನಡೆಸಲಾಗುವುದು. ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸುಮಾರು 1 ಲಕ್ಷದಷ್ಟು  ಹಾಸಿಗೆಗಳನ್ನು ವಿವಿಧ ಆಸ್ಪತ್ರೆಗಳಲ್ಲಿ ಸೋಕಿತರಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೇರಿದಂತೆ ಲ್ಯಾಮ್‌ ರೀಸರ್ಚ್‌ ಪ್ರೈ.ಲಿ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next