ತುಮಕೂರು: ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ವಾರಾಂತ್ಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿಜಾರಿಗೊಳಿಸಬೇಕು ಹಾಗೂ ಜಿಲ್ಲೆಯಲ್ಲಿ ಶುಕ್ರವಾರವೇ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಸ್ವಾನ್ ಮೂಲಕ ತಹಶೀಲ್ದಾರರು ಸೇರಿದಂತೆ ವಿವಿಧಇಲಾಖೆಗಳ ತಾಲೂಕಿನ ಅಧಿಕಾರಿಗಳೊಂದಿಗೆವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಸಭೆ ನಡೆಸಿ ಸೂಚನೆ ನೀಡಿದರು.
ಕಟ್ಟುನಿಟ್ಟಾಗಿ ಜಾರಿಗೊಳಿಸಿ: ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಯಾವ್ಯಾವ ಚಟುವಟಿಕೆಗಳಿಗೆನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳಿಗೆ ಅವಕಾಶ ಮಾಡಿಕೊಡಿ. ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿಗಳನ್ನು ಪೊಲೀಸ್ ಇಲಾಖೆಯಸಮನ್ವಯದೊಂದಿಗೆ ಕಟ್ಟುನಿಟ್ಟಾಗಿ ಜಾರಿಗೆತರಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಪ್ರತಿನಿತ್ಯ ಕ್ಲೀನಿಂಗ್ ಮಾಡಬೇಕು ಎಂದರು.
ವ್ಯವಸ್ಥೆ ಕಲ್ಪಿಸಿ: ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಆರಂಭಿಸುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸೋಂಕಿತರನ್ನು ದಾಖಲು ಮಾಡಲು ಪ್ರಾರಂಭಿಸಬೇಕು. ಮಾರ್ಗಸೂಚಿ ಅನ್ವಯಸೋಂಕಿತರಿಗೆ ಉತ್ತಮ ಗುಣಮಟ್ಟದ ತಿಂಡಿ,ಊಟ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು.ಕೋವಿಡ್ ಕೇರ್ ಸೆಂಟರ್‌ನಲ್ಲಿ ಪಿಪಿಇ ಕಿಟ್, ಎನ್ -95 ಮಾಸ್ಕ್, ತ್ರಿಬಲ್ ಲೇಯರ್ ಮಾಸ್ಕ್,ಸ್ಯಾನಿಟೈಸರ್ ಮತ್ತಿತರ ವ್ಯವಸ್ಥೆ ಕಲ್ಪಿಸಬೇಕು. ಅಲ್ಲಿಕರ್ತವ್ಯ ನಿರತ ವೈದ್ಯರು , ನರ್ಸಿಂಗ್ ಸಿಬ್ಬಂದಿ ದಿನದ 24 ಗಂಟೆ ಪಾಳಿಯಲ್ಲಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕಳೆದ ಬಾರಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಮಾಡಿದಂತೆಯೇ ಈ ಬಾರಿಯೂ ನಿರ್ವಹಣೆ ಮಾಡಲು ವ್ಯವಸ್ಥೆ ಮಾಡಬೇಕು. ಅಗತ್ಯವಿರುವ ಆಕ್ಸಿಜನ್ ಅನ್ನು ಜಂಬೂ ಸಿಲಿಂಡರ್‌ಗಳಲ್ಲಿ ತುಂಬಿಸಿಕೊಳ್ಳಿ. ಯಾವುದೇ ಕಾರಣಕ್ಕೂ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗದಂತೆನಿಗಾ ವಹಿಸಬೇಕು. ರೆಮಿಡಿಸ್ವಿಯರ್ ಅಕ್ರಮವಾಗಿ ಮಾರಾಟವಾಗದಂತೆ ನಿಗಾ ಇಡಬೇಕು. ಸೋಂಕಿತರ ಕನಿಷ್ಠ 20 ಮಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು ಎಂದು ಸೂಚಿಸಿದರು.
ಸರ್ಕಾರದ ಎಸ್‌ಒಪಿ ಯಂತೆ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್‌ಗಳಿಗೆ ನಿರ್ದೇಶಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಅಪರಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಎಸಿ ಅಜಯ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.