Advertisement
ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಸಂಖ್ಯೆ 30 ಲಕ್ಷಕ್ಕೆ ಏರಿಕೆಯಾಗಿದೆ. ಅದರಲ್ಲಿ 29.59 ಲಕ್ಷ ಮಂದಿ ಗುಣಮುಖರಾಗಿದ್ದು, 38,318 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 7,456 ಸಕ್ರಿಯ ಪ್ರಕರಣಗಳಿದ್ದು, 347 ಮಂದಿ ಮಂಗಳವಾರ ಗುಣಮುಖರಾಗಿದ್ದಾರೆ. ಡಿ.28ರಂದು ಕೋವಿಡ್ ಪಾಸಿಟಿವಿಟಿ ದರ ಶೇ.50 ಹಾಗೂ ಮರಣ ಪ್ರಮಾಣ ಶೇ.0.56ರಷ್ಟಿದೆ.
ರಾಜ್ಯದಲ್ಲಿ ಪತ್ತೆಯಾದ ಒಟ್ಟು ಪ್ರಕರಣದಲ್ಲಿ ಶೆ.70ರಷ್ಟು ಕೋವಿಡ್ ಪ್ರಕರಣ ಬೆಂಗಳೂರಿನಲ್ಲಿ ಪತ್ತೆಯಾಗಿದೆ. 269 ಪಾಸಿಟಿವ್ ಪತ್ತೆಯಾಗಿದ್ದು, 209 ಮಂದಿ ಸೋಂಕಿನಿಂದ ಗುಣಮುಖ ಹೊಂದಿದ್ದಾರೆ. 7,456 ಸಕ್ರಿಯ ಪ್ರಕರಣದಲ್ಲಿ 6,122 ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿವೆ. 16,388ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಡುಪಿ 20, ಮೈಸೂರು ಹಾಗೂ ದ.ಕ. ಜಿಲ್ಲೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೊಡಗು, ಕೋಲಾರ, ರಾಮನಗರ, ಧಾರವಾಡ, ಹಾಸನ, ಶಿವಮೊಗ್ಗ, ಮಂಡ್ಯ, ತುಮಕೂರು, ವಿಜಯಪುರದಲ್ಲಿ ಬೆರಳೆಣಿಕೆ ಪ್ರಕರಣ ದಾಖಲಾಗಿದೆ. ಗದಗ, ಹಾವೇರಿ, ಕೊಪ್ಪಳ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ,ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
Related Articles
Advertisement
ಇದನ್ನೂ ಓದಿ : ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ : ಗೈರಾದ ಶಿಕ್ಷಕರಿಗೆ ನೋಟಿಸ್ ನೀಡಲು ಸೂಚನೆ