Advertisement
ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಸೋಂಕು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ರಜೆ ನೀಡಲಾಗಿದೆ.
Related Articles
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾದರೂ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ ಐದು ಹೊಸ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿವೆ. ಈ ಮೂಲಕ ಒಟ್ಟು ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹದೇವಪುರ ವಲಯದಲ್ಲಿ ನಾಲ್ಕು ಹಾಗೂ ದಾಸರಹಳ್ಳಿ ವಲಯದಲ್ಲಿ ಒಂದು ಹೊಸದಾಗಿ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
Advertisement
ದೈನಂದಿನ ಪ್ರಕರಣ ಇಳಿಕೆನಗರದಲ್ಲಿ 500 ರ ಗಡಿದಾಟಿದ ದೈನಂದಿನ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಕಳೆದ ಭಾನುವಾರ 429 ಕ್ಕೆ ಇಳಿಕೆಯಾದರೆ, ಸೋಮವಾರ 400 ಕ್ಕೆ ಕುಸಿದಿದೆ. ಉಳಿದಂತೆ ನಗರದಲ್ಲಿ ಸೋಮವಾರ 354 ಮಂದಿ ಗುಣಮುಖರಾಗಿದ್ದು, ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. ನಗರದಲ್ಲಿ 3,542 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 29 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರು ಐಸಿಯು ಮತ್ತು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದೆಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.