Advertisement

ಕೋವಿಡ್ ಸೋಂಕಿಗೆ ಪುತ್ತೂರಿನ 62 ವರ್ಷದ ಮಹಿಳೆ ಸಾವು

11:56 AM Jul 15, 2020 | sudhir |

ಪುತ್ತೂರು: ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ 62 ವರ್ಷದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ಬೆಳ್ಳಾರೆ ನೆಟ್ಟಾರು ನಿವಾಸಿ ಮಹಿಳೆಯನ್ನು ಜು.14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು.ಈ ವೇಳೆ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿಯಲ್ಲಿ ಸೋಂಕು ದೃಢ ಪಟ್ಟಿರುವುದು ಬೆಳಕಿಿಗೆ ಬಂದಿದೆ. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಬುಧವಾರ ಮೃತಪಟ್ಟಿದ್ದಾರೆ .

Advertisement

Udayavani is now on Telegram. Click here to join our channel and stay updated with the latest news.

Next