Advertisement

ಒಂದು ಸಾವು -80 ಮಂದಿಗೆ ಸೋಂಕು

07:14 PM Aug 15, 2020 | Suhan S |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ ಮತ್ತೆ 80 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1430ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.

Advertisement

ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 59 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಚಿತ್ರದುರ್ಗ ತಾಲೂಕಿನಲ್ಲಿ 22 ಹೊಳಲ್ಕೆರೆ-1, ಹಿರಿಯೂರು-7, ಚಳ್ಳಕೆರೆ-1, ಹೊಸದುರ್ಗ-16 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 33 ಸೇರಿದಂತೆ ಒಟ್ಟು 80 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಶುಕ್ರವಾರ ಒಟ್ಟು 945 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಿದ್ದು, ವರದಿಯಲ್ಲಿ 80 ಜನರಿಗೆ ಕೋವಿಡ್‌ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 1430 ಕ್ಕೆ ಏರಿಕೆಯಾಗಿದ್ದು, ಈವರೆಗೆ 19 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 766 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 644 ಸಕ್ರಿಯ ಪ್ರಕರಣಗಳು ಇವೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 459 ಕಂಟೇನ್ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 9123 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 28262 ಜನರ ಮಾದರಿ ಸಂಗ್ರಹಿಸಲಾಗಿದ್ದು, 21968 ಜನರ ವರದಿ ನೆಗೆಟಿವ್‌ ಬಂದಿದೆ. ಉಳಿದ 4563 ಜನರ ವರದಿ ಬರುವುದು ಬಾಕಿ ಇದೆ. 301 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next