ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕು ಮಂದಿ ವಿದ್ಯಾರ್ಥಿಗಳು ಮತ್ತು ಇಬ್ಬರು ಶಿಕ್ಷಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದ್ದಾರೆ.
ನಾಲ್ವರು ವಿದ್ಯಾರ್ಥಿಗಳಲ್ಲಿ ಇಬ್ಬರು ಕಡೂರು ಹಾಗೂ ಚಿಕ್ಕಮಗಳೂರಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ನಿನ್ನೆಯಷ್ಟೇ ಜಿಲ್ಲೆಯ ಮೂವರು ಶಿಕ್ಷಕರಲ್ಲಿ ಸೋಂಕು ದೃಢ ಪಟ್ಟಿತ್ತು, ಇಂದು ಮತ್ತೆ ಇಬ್ಬರು ಶಿಕ್ಷರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ದೃಡೀಕರಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ೫ ಮಂದಿ ಶಿಕ್ಷಕರು ಹಾಗೂ ನಾಲ್ಕು ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿ:ಪೂರ್ಣಪ್ರಮಾಣದ ಪ್ರೇಕ್ಷಕರೊಂದಿಗೆ ಸಿನೆಮಾ ಪ್ರದರ್ಶನಕ್ಕೆ ಅನುಮತಿ ನೀಡಿ:ಸಿಎಂ ಗೆ ಶಾಸಕರ ಮನವಿ