Advertisement

ಸಿಬ್ಬಂದಿಗೆ ಕೋವಿಡ್ ಸೋಂಕು ದೃಢ! ಜುಲೈ 29ರಂದು ಬಂಟ್ವಾಳ ಪುರಸಭಾ ಕಚೇರಿ ಸೀಲ್ ಡೌನ್

10:07 PM Jul 28, 2020 | sudhir |

ಬಂಟ್ವಾಳ: ಬಂಟ್ವಾಳ ಪುರಸಭಾ ಕಚೇರಿಯ ಮಹಿಳಾ ಸಿಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜು. 29ರಂದು ಪುರಸಭೆ ಸೀಲ್ ಡೌನ್ ಆಗಲಿದೆ.

Advertisement

ಸಿಬ್ಬಂದಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದ ವೇಳೆ ಸೋಂಕು ದೃಢಪಟ್ಟಿದೆ. ಹೀಗಾಗಿ ಪುರಸಭಾ ಕಚೇರಿಯಲ್ಲಿ ಸ್ಯಾನಿಟೈಸೇಶನ್ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ವಿವಿಧ ಖಾಯಿಲೆಯಿಂದ ಬಳಲುತ್ತಿದ್ದ ತಾಲೂಕಿನ ಇಬ್ಬರು ಮಂಗಳವಾರ ಮೃತಪಟ್ಟಿದ್ದು, ಅವರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ದೃಢಪಟ್ಟಿತ್ತು. 25 ವರ್ಷದ ನರಿಕೊಂಬಿನ ಮಹಿಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹಾಗೂ 62 ವರ್ಷದ ಪುದು ಕುಂಪನಮಜಲಿನ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ ತಾಲೂಕಿನಲ್ಲಿ 29 ಮಂದಿಗೆ ಸೋಂಕು ದೃಢಪಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next