ಬೆಂಗಳೂರು: ನಗರದಲ್ಲಿ ಕ್ಲಸ್ಟರ್ ಮಾದರಿಯಲ್ಲಿ ಕೊರೊನಾ ಸೋಂಕು ದೃಢ ಪಡುತ್ತಿರುವ ಹಿನ್ನೆಲೆಯಲ್ಲಿ ಸಭೆ ಮತ್ತು ಸಮಾರಂಭಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ನಿಗಾ ವಹಿಸುವುದು ಮತ್ತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಬಿಬಿಎಂಪಿ ಮಾರ್ಷಲ್‌ಗಳನ್ನು ನಿಯೋಜಿಸಿದೆ.
ಬುಧವಾರ ನಗರದ ವಿವಿಧ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿದ ಮಾರ್ಷಲ್‌ಗಳು ಮಾಸ್ಕ್ ಹಾಗೂ ಸಾಮಾಜಿಕ ಅಂತರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಿದರು. ಜೆ.ಪಿ ಪಾರ್ಕ್ ವಾರ್ಡ್‌ನ ರಾಮಯ್ಯ ಮ್ಯಾರೇಜ್ ಹಾಲ್, ಗಂಗಮ್ಮಾ ತಿಮ್ಮಯ್ಯ ಕಲ್ಯಾಣ ಮಂಟಪ ಸೇರಿದಂತೆ ವಿವಿಧ ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.
ಬುಧವಾರ ಕಲ್ಯಾಣ ಮಂಟಪಗಳಲ್ಲಿ ಜಾಗೃತಿ ಮೂಡಿಸಲಾಗಿದ್ದು, ಗುರುವಾರದಿಂದ ನಿಯಮ ಪಾಲನೆ ಮಾಡದಿದ್ದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಮಂಟಪದ ಒಳಗೆ ಬಿಡಬಾರದು. ಒಂದು ವೇಳೆ ಅವಕಾಶ ನೀಡಿದರೆ ಕಲ್ಯಾಣ ಮಂಟಪದ ಆಡಳಿತ ಮಂಡಳಿ ಅಥವಾ ಮಾಲೀಕರನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಕಸ ನಿಯಮ ಪಾಲನೆ ಮಾಡಲು ವಾರ್ಡ್ ವಾರು ನಿಯೋಜಿಸಲಾಗಿರುವ ಮಾರ್ಷಲ್‌ಗಳಿಗೆ ಆಯಾ ವಾರ್ಡ್ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪಗಳಲ್ಲಿ ಕೊರೊನಾ ನಿಯಮ ಪಾಲನೆ ಜವಾಬ್ದಾರಿ ನೀಡಲಾಗಿದೆ.
ಇದನ್ನೂ ಓದಿ:ಸೀನಿಯರ್ ತಪ್ಪು ಮಾಡಿದವರಿಗೆ ಬುದ್ದಿ ಹೇಳಬೇಕು : ಜಗ್ಗೇಶ್ ಗೆ ಸಂದೇಶ್ ನಾಗರಾಜ್ ಕಿವಿಮಾತು