ಮಂಗಳೂರು: ದ.ಕ. ಹಾಗೂ ಉಡುಪಿ ಜಿಲ್ಲೆಗಳ ಶಿಶು ಪಾಲನಾ ಕೇಂದ್ರಗಳಲ್ಲಿ ಕೋವಿಡ್ ಪ್ರಕರಣ ಶೂನ್ಯವಾಗಿದ್ದು, ಜಿಲ್ಲಾಡಳಿತಗಳು ಕೈಗೊಂಡಿದ್ದ ಸೂಕ್ತ ಮುಂಜಾಗ್ರಾತಾ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ| ಆರ್.ಜಿ. ಆನಂದ್ ಪತ್ರಿಕಾ ಗೋಗೋಷ್ಠಿಯಲ್ಲಿ ಹೇಳಿದರು.
ಜಿಲ್ಲೆಯಲ್ಲಿ 75 ಹಾಗೂ ಉಡುಪಿ ಜಿಲ್ಲೆಯಲ್ಲಿ 3,904 ಹಾಗೂ ಉಡುಪಿ ಜಿಲ್ಲೆಯಲ್ಲಿ 28 ಶಿಶು ಪಾಲನಾ ಕೇಂದ್ರಗಳಲ್ಲಿ 400 ಮಕ್ಕಳಿದ್ದರು. ಕೊರೊನಾ ಸಂದರ್ಭ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶಿಶು ಪಾಲನಾ ಕೇಂದ್ರ ಸೇರಿದಂತೆ ಮಕ್ಕಳಿಗೆ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ ಎಂದು ಶ್ಲಾಘಿಸಿದರು.
ದೇಶದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನಲೆಯಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳುವುದು ಅತಿ ಅಗತ್ಯವಾಗಿದೆ. ಲಸಿಕೆಯು ಸೋಂಕಿನಿಂದಾಗಬಹುದಾದ ಗಂಭೀರತೆಯ ಪ್ರಮಾಣವನ್ನು ತಗ್ಗಿಸುವಲ್ಲಿ ಸಹಕಾರಿಯಾಗಲಿದೆ ಎಂದರು.
ಸಂವೇದನ ಸಹಾಯವಾಣಿ :
ಕೋವಿಡ್ ಸಂದರ್ಭ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿ ಪೀಡಿತ ಮಕ್ಕಳಿಗೆ ಸಲಹೆ ಮತ್ತು ಮಾನಸಿಕ ಸಾಮಾಜಿಕ ಬೆಂಬಲವನ್ನು ಒದಗಿಸುವ ದೃಷ್ಟಿಯಿಂದ ಆರಂಭಿಸಿರುವ ಸಂವೇದನ ಸಹಾಯವಾಣಿ ಸದ್ಯ ಕನ್ನಡ ಭಾಷೆಯಲ್ಲೂ ಲಭ್ಯವಿದೆ. ದಿನಕ್ಕೆ ಸಹಾಯವಾಣಿಗೆ ಸುಮಾರು 5,000ದಷ್ಟು ಕರೆಗಳು ಬರುತ್ತಿವೆ ಎಂದು ಡಾ| ಆನಂದ್ ಹೇಳಿದರು.
ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಕೆ.ವಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪಾಪ ಬೋವಿ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಉಪಸ್ಥಿತರಿದ್ದರು.