Advertisement

ಒಂದೇ ದಿನ ದ್ವಿಶತಕ ಬಾರಿಸಿದ ಕೋವಿಡ್‌ -19

12:42 PM Aug 04, 2020 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್ ರಣಕೇಕೆ ಮುಂದುವರಿದಿದ್ದು, ಸೋಮವಾರ ಒಂದೇ ದಿನ ದ್ವಿ ಶತಕ ಬಾರಿಸಿದೆ. ಜಿಲ್ಲೆಯಲ್ಲೇ ಮೊದಲ ಬಾರಿಗೆಅತಿಹೆಚ್ಚು 209 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 2,153ಕ್ಕೆ ಏರಿಕೆಯಾಗಿದೆ.

Advertisement

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ರಣಕೇಕೆ ಹಾಕುತ್ತಿದೆ. ಪ್ರತಿದಿನ ನೂರರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ, ಸೋಮವಾರಿ ಬರೋಬ್ಬರಿ 209 ಜನರಿಗೆ ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಸಮುದಾಯಕ್ಕಿಳಿದ ಸೋಂಕು: ಕಳೆದ ಒಂದು ವಾರದ ಕೋವಿಡ್ ವಿದ್ಯಮಾನ ಗಮನಿಸಿದರೆ ಜಿಲ್ಲೆಯಲ್ಲಿ ವೈರಸ್‌, ಸಮುದಾಯಕ್ಕೆ ವಿಸ್ತರಣೆಯಾಗಿದೆ ಎಂಬ ಮಾತು ಕೇಳಿ ಬರುತ್ತದೆ.

ಹೀಗಾಗಿ ಜಿಲ್ಲಾಡಳಿತವೂ, ಜಿಲ್ಲೆಯಾದ್ಯಂತ ರ್‍ಯಾಂಡಮ್‌ ಆಗಿ ತಪಾಸಣೆಗೆ ಇಳಿದಿದೆ. ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು, ಪೊಲೀಸರು, ಸೋಂಕಿತರು ಪತ್ತೆಯಾದ ಪ್ರದೇಶದ ಸುತ್ತಲಿನ ಜನರು, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗೆ ಬರುವ ಲಕ್ಷಣ ಇರುವ ಜನರು, ಕೂಲಿ ಕಾರ್ಮಿಕರು, ಕೆಎಸ್‌ಆರ್‌ಟಿ ಸಿಬ್ಬಂದಿ, ಉಸಿರಾಟ ತೊಂದರೆ ಹಾಗೂ ಕೆಮ್ಮು-ನೆಗಡಿ-ಜ್ವರ ಕಂಡು ಬಂದ ವ್ಯಕ್ತಿಗಳ ತಪಾಸಣೆ ಮಾಡಲಾಗುತ್ತಿದೆ. ರ್‍ಯಾಂಡಮ್‌ ಆಗಿ ತಪಾಸಣೆ ಮಾಡುತ್ತಿರುವುದರಿಂದ ಜಿಲ್ಲೆಯಲ್ಲಿ ನಿತ್ಯ ಸೋಂಕಿತರ ಸಂಖ್ಯೆಯೂ ಹೆಚ್ಚುತ್ತಿವೆ ಎಂದು ಡಿಎಚ್‌ಒ ಡಾ|ಅನಂತ ದೇಸಾಯಿ ಉದಯವಾಣಿಗೆ ತಿಳಿಸಿದ್ದಾರೆ.

54 ಜನ ಕೋವಿಡ್‌ಗೆ ಬಲಿ: ಜಿಲ್ಲೆಯಲ್ಲಿ ಕೋವಿಡ್ ಗೆ ಈವರೆಗೆ 54 ಜನರು ಬಲಿಯಾಗಿದ್ದಾರೆ. ಅದರಲ್ಲಿ ಓರ್ವ ಸರ್ಕಾರಿ ವೈದ್ಯಾಧಿಕಾರಿ, ಓರ್ವ ಖಾಸಗಿ ವೈದ್ಯರನ್ನೂ ಕೋವಿಡ್ ಬಲಿ ಪಡೆದಿದೆ. 51 ಜನರು ಬಾಗಲಕೋಟೆ ಜಿಲ್ಲೆಯಲ್ಲಿ ಮೃತಪಟ್ಟರೆ, ಮೂವರು ಬೇರೆ ಬೇರೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next