Advertisement

109 ಹೊಸ ಪ್ರಕರಣಗಳು: ಎರಡು ಸಾವಿರ ದಾಟಿದ ಉಡುಪಿಯ ಸೋಂಕಿತರ ಸಂಖ್ಯೆ

06:16 PM Jul 18, 2020 | keerthan |

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ ಶತಕ ದಾಟಿದ್ದು, ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರ ದಾಟಿದೆ.

Advertisement

ಜಿಲ್ಲೆಯಲ್ಲಿ ಇಂದು 109 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ.

ಕುಂದಾಪುರದ ನಗರ ಪೊಲೀಸ್‌ ಠಾಣೆಯ ಎಎಸ್‌ಐ ಒಬ್ಬರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಮುಂಜಾಗ್ರತಾ ಕ್ರಮವಾಗಿ ಠಾಣೆಯನ್ನು ಒಂದು ದಿನದ ಮಟ್ಟಿಗೆ ಪ್ರವಾಸಿ ಮಂದಿರಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಯಾನಿಟೈಸ್‌ ಮಾಡಲಾಗಿದೆ.

ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರರೊಬ್ಬರಿಗೆ ಇಂದು ಸೋಂಕು ದೃಢವಾಗಿದ್ದು, ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ.

ಜಿಲ್ಲೆಯಲ್ಲಿ ಇಂದು 401 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 109 ಜನರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಉಳಿದ 292 ಜನರ ವರದಿ ನೆಗೆಟಿವ್ ಆಗಿದೆ.

Advertisement

ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2088ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 1586 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹತ್ತು ಮಂದಿ ಸೋಂಕಿತರು ಮೃತರಾಗಿದ್ದಾರೆ. ಸದ್ಯ 492 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 24,382 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದ್ದು, ಒಟ್ಟು 21,757 ಪರೀಕ್ಷಾ ವರದಿಗಳು ನೆಗಟಿವ್ ಆಗಿದೆ. 2088 ಜನರ ಗಂಟಲು ದ್ರವ ಪರೀಕ್ಷಾ ವರದಿ ಪಾಸಿಟಿವ್ ಆಗಿದೆ. ಇನ್ನೂ 537 ಗಂಟಲು ದ್ರವ ಮಾದರಿಗಳ ಪರೀಕ್ಷಾ ಫಲಿತಾಂಶ ಬಾಕಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next