Advertisement

ಮೂರು ಲಕ್ಷ ದಾಟಿದ ಸಾವಿನ ಸಂಖ್ಯೆ: ದೇಶದಲ್ಲಿ 2.22 ಲಕ್ಷ ಹೊಸ ಸೋಂಕು ಪ್ರಕರಣಗಳು ಪತ್ತೆ

10:12 AM May 24, 2021 | Team Udayavani |

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆ ಮೂರು ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4454 ಮಂದಿ ಕೋವಿಡ್  19 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 3,03,720 ಮಂದಿ ಸಾವನ್ನಪ್ಪಿದ್ದಾರೆ.

Advertisement

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,22,315 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ತಮಿಳುನಾಡಿನಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಿದೆ. ತಮಿಳುನಾಡಿನಲ್ಲಿ 35,483 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 26,672, ಕರ್ನಾಟಕದಲ್ಲಿ 25,979 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯದಲ್ಲಿ 25,820 ಪ್ರಕರಣಗಳು ಮತ್ತು ಆಂಧ್ರ ಪ್ರದೇಶದಲ್ಲಿ 18,767 ಹೊಸ ಕೋವಿಡ್ ಪ್ರಕರಣಗಳು ಕಂಡು ಬಂದಿದೆ.

ಇದನ್ನೂ ಓದಿ:ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರನ್ನು ವಾರಿಯರ್ಸ್ ಎಂದು ಪರಿಗಣಿಸಿ, 50 ಲಕ್ಷ ರೂ ಪರಿಹಾರ ನೀಡಿ

ದೇಶದಲ್ಲಿ ಪತ್ತೆಯಾದ ಒಟ್ಟು ಪ್ರಕರಣಗಳ ಪೈಕಿ 59.7% ಪ್ರಕರಣಗಳು ಈ ಐದು ರಾಜ್ಯಗಳಲ್ಲಿಯೇ ಪತ್ತೆಯಾಗಿದೆ. ಅದರಲ್ಲೂ ತಮಿಳುನಾಡು 15.96% ಪ್ರಕರಣಗಳಿಗೆ ಸಾಕ್ಷಿಯಾಗಿದೆ.

ಈ 24 ಗಂಟೆ ಅವಧಿಯಲ್ಲಿ 4454 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 1320 ಮಂದಿ ಸೋಂಕಿತರು ಮೃತಪಟ್ಟರೆ, ಕರ್ನಾಟಕದಲ್ಲಿ 624 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next