Advertisement

ಕಾಫಿನಾಡಲ್ಲಿ ಕೋವಿಡ್‌ ಸೋಂಕು ಪ್ರಮಾಣ ಇಳಿಕೆ

01:03 PM Nov 27, 2021 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಪ್ರಾರಂಭದಲ್ಲಿ ಶೇ.28ರಷ್ಟಿದ್ದ ಕೋವಿಡ್‌ ಸೋಂಕು ಶುಕ್ರವಾರ ಶೇ.0.3ಕ್ಕೆ ಇಳಿಕೆಯಾಗಿದೆ. ಮೂರ್ನಾಲ್ಕು ತಿಂಗಳಿಂದ ಕೋವಿಡ್‌ ಕಾರಣದಿಂದ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ, ಕೋವಿಡ್‌ ಸೋಂಕು ಜಿಲ್ಲೆಯಲ್ಲಿ ಕ್ಷೀಣಿಸಿದ್ದು, ಜಿಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದೆ.

Advertisement

ಶುಕ್ರವಾರ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್‌ ಸುದ್ದಿಗಾರರಿಗೆ ಮಾಹಿತಿ ನೀಡಿ, ಇಲ್ಲಿಯವರೆಗೂ ಮೊದಲ ಹಂತದ ಲಸಿಕೆ ವಿತರಣೆ ಶೇ.100 ರಷ್ಟು ಮತ್ತು ಎರಡನೇ ಹಂತದ ಲಸಿಕೆ ವಿತರಣೆ ಶೇ.70ರಷ್ಟು ಪ್ರಗತಿ ಸಾಧಿಸಲಿದೆ. ಲಸಿಕೆ ವಿತರಣೆಯಲ್ಲಿ ಜಿಲ್ಲೆ ರಾಜ್ಯದಲ್ಲಿ 10-12ನೇ ಸ್ಥಾನದಲ್ಲಿದೆ ಎಂದರು. ಮೊದಲ ಹಂತದ ಲಸಿಕೆ ವಿತರಣೆಯಲ್ಲಿ ಜಿಲ್ಲೆ ಶೇ.90ರಷ್ಟು ಪ್ರಗತಿ ಸಾಧಿ ಸಿದೆ. 2ನೇ ಹಂತದ ಲಸಿಕೆ ವಿತರಣೆಯಲ್ಲಿ ಶೇ.57ರಷ್ಟು ಪ್ರಗತಿ ಸಾಧಿಸಿದ್ದು, ಜಿಲ್ಲೆಯಲ್ಲಿ ಪ್ರತಿ ದಿನ 1000 ಜನರನ್ನು ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯ ಇಲಾಖೆ ಗುರಿ ನಿಗದಿಪಡಿಸಿದ್ದು, ಜಿಲ್ಲೆಯಲ್ಲಿ ಪ್ರತಿ ದಿನ 1,400 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಪ್ರತಿ ಆಸ್ಪತ್ರೆಯಲ್ಲಿ ಕಾಲ್‌ ಸೆಂಟರ್‌ ತೆರೆಯಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗೆ ತೆರಳಿ ಲಸಿಕೆ ನೀಡುತ್ತಿದ್ದಾರೆ. ಲಸಿಕೆ ಪಡೆಯುವುದರಿಂದ ಆಗುವ ಪ್ರಯೋಜನಗಳನ್ನು ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಗುತ್ತಿದೆ. ಇವರಿಂದ ಪೋಷಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ ಎಂದರು. ಈ ಹಿಂದೆ ಮೂಡಿಗೆರೆ ತಾಲೂಕಿನ 2 ಶಾಲಾ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆ ನಂತರ ಇಲ್ಲಿಯವರೆಗೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಸೋಂಕು ಕಾಣಿಸಿಕೊಂಡಿಲ್ಲ ಎಂದು ತಿಳಿಸಿದರು.

ಕೋವಿಡ್‌ ಪ್ರಾರಂಭದ ದಿನಗಳಲ್ಲಿ ಜಿಲ್ಲೆಯಲ್ಲಿ ಶೇ.28ರಷ್ಟು ಸೋಂಕು ಕಾಣಿಸಿಕೊಂಡಿತ್ತು. ಈಗ ಶೇ.0.3ಕ್ಕೆ ಇಳಿಕೆಯಾಗಿದೆ. ಕೋವಿಡ್‌ ನಿಂದ ಮೂರ್ನಾಲ್ಕು ತಿಂಗಳಲ್ಲಿ ಯಾವುದೇ ವ್ಯಕ್ತಿ ಮೃತಪಟ್ಟಿಲ್ಲ. ಇದು ಸಂತೋಷದಾಯಕ ವಿಚಾರವಾಗಿದ್ದು, ಇದುವರೆಗೂ ಒಟ್ಟು 395 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಸದ್ಯ 48 ಸಕ್ರಿಯ ಪ್ರಕರಣಗಳಿದ್ದು 40 ಜನರನ್ನು ಹೋಮ್‌ ಐಸೋಲೇಶನ್‌ಗೆ ಒಳಪಡಿಸಲಾಗಿದೆ. 8 ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಔಷಧ ಕೊರತೆ ಇಲ್ಲ. 3ನೇ ಅಲೆ ಮಕ್ಕಳನ್ನು ಹೆಚ್ಚು ಬಾ ಧಿಸಲಿದೆ ಎಂದು ಹೇಳಲಾಗುತ್ತಿತ್ತು. ಜಿಲ್ಲೆಯ ಮಕ್ಕಳಲ್ಲಿ ಸೋಂಕು ಅಷ್ಟಾಗಿ ಪತ್ತೆಯಾಗಿಲ್ಲ ಎಂದರು.

ಜಿಲ್ಲಾಸ್ಪತ್ರೆಯಲ್ಲಿ 1,000 ಲೀ. ಆಕ್ಸಿಜನ್‌ ಪ್ಲಾಂಟ್‌ ಮತ್ತು ಆಕ್ಸಿಜನ್‌ ಉತ್ಪಾದನಾ ಘಟಕ ಕಾರ್ಯಾರಂಭ ಮಾಡಿವೆ. ಕಡೂರು, ಮೂಡಿಗೆರೆ, ಶೃಂಗೇರಿ ತಾಲೂಕಿನಲ್ಲಿ 500ಲೀ. ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ತೆರೆಯಲಾಗಿದೆ. ತರೀಕೆರೆ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಆಕ್ಸಿಜನ್‌ ಉತ್ಪಾದನಾ ಘಟಕ ತೆರೆಯಲು ಸಿವಿಲ್‌ ಕಾಮಗಾರಿ ಪೂರ್ಣಗೊಂಡಿದೆ. ಯಂತ್ರೋಪಕರಣ ಅಳವಡಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

Advertisement

ಶೃಂಗೇರಿ ತಾಲೂಕಿನಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣ ಸಂಬಂಧ ಜಿಲ್ಲಾ ಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗತ್ಯ ಜಾಗ ನೀಡಿದರೆ ಕಟ್ಟಡ ನಿರ್ಮಾಣಕ್ಕೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next